More

    ಅಭ್ಯರ್ಥಿಯ ಖರ್ಚು ವೆಚ್ಚಗಳ ಬಗ್ಗೆ ನಿಗಾವಹಿಸಿ: ವೆಚ್ಚ ವೀಕ್ಷಕ ಕುಮಾರ್ ಪ್ರಿಯತಂ ಅಶೋಕ್ ಸೂಚನೆ

    ಮಂಡ್ಯ: ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ವೆಚ್ಚ ವೀಕ್ಷಕರಾದ ಕುಮಾರ್ ಪ್ರಿಯತಂ ಅಶೋಕ್ ಮತ್ತು ರೋಹಿತ್ ಅಸುದಾನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಂಟು ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ವೆಚ್ಚ ವೀಕ್ಷಕ ತಂಡದ ಅಧಿಕಾರಿ ಹಾಗೂ ಸಿಬ್ಬಂದಿಯೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್‌ಎಸ್‌ಟಿ, ಎಸ್‌ಎಸ್‌ಟಿ, ವಿವಿಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ನಡೆಸಿ ಅಭ್ಯರ್ಥಿಯು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು ಎಂದರು.
    ಅಭ್ಯರ್ಥಿ ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆದಿರುವುದು. ಲೆಕ್ಕಾಚಾರಕ್ಕೆ ಬಾರದೇ ಇರುವ ರೀತಿ ಯಾವುದಾದರೂ ಪ್ರಚಾರ ಕೆಲಸ ಹಣ ವೆಚ್ಚ ಮಾಡುತ್ತಿದ್ದರೆ, ತಕ್ಷಣ ನಮ್ಮ ಗಮನಕ್ಕೆ ತರಬೇಕು. ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಹಣದ ಬಲದ ಮೇಲೆ ಚುನಾವಣೆ ನಡೆಯಬಾರದು. ಬದಲಿಗೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಿಕೊಳ್ಳಿ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
    ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡ, ಅಧಿಕಾರಿ, ಸ್ಥಾಪನೆಯಾಗಿರುವ ಚೆಕ್‌ಪೋಸ್ಟ್‌ಗಳು ಹಾಗೂ ಇನ್ನಿತರೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಎಒ ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts