ಪರೀಕ್ಷೆ ಸುಸೂತ್ರವಾಗಿ ನಡೆಯಲು ಶ್ರಮಿಸಿ

ವಿಜಯವಾಣಿ ಸುದ್ದಿಜಾಲ ಯಾದಗಿರಿ
ಜಿಲ್ಲಾದ್ಯಂತ ಮಾ 1ರಿಂದ 18ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾಷರ್ಿ ಕ ಪರೀಕ್ಷೆಗಳು ಸುಸೂತ್ರವಾಗಿ ನಡೆಯುವಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-2019ರ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ವಿದ್ಯುತ್ ಸೌಕರ್ಯ, ಶೌಚಾಲಯ, ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಿರುವುದು ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ತಾಲ್ಲೂಕು ತಹಶೀಲ್ದಾರರು ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಪರೀಕ್ಷೆಗಳು ಅತೀಸೂಕ್ಷ್ಮವಾದ ಪ್ರಕ್ರಿಯೆಯಾಗಿದ್ದು, ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದೊಳಗೆ ತಲುಪಬೇಕು. ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ವಾಹನಕ್ಕೆ ಜಿಪಿಎಸ್ ಅಳವಡಿಸಿರುವುದರಿಂದ ನಿಗದಿಪಡಿಸಿದ ಮಾರ್ಗದಲ್ಲೆ ಚಲಿಸಬೇಕು ಎಂದು ಅವರು ತಿಳಿಸಿದರು.

ಅಭ್ಯಥರ್ಿಗಳಿಗೆ ಆಸನ ವ್ಯವಸ್ಥೆಯನ್ನು ಕೊಠಡಿಯಿಂದ ಹೊರಗೆ, ಕಾರಿಡಾರ್ ಅಥವಾ ನೆಲದ ಮೇಲೆ ಕುಳಿತು ಪರೀಕ್ಷೆಗಳನ್ನು ಬರೆಯಿಸುವಂತಿಲ್ಲ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಈಗಾಗಲೇ ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರದ ಸಂಪೂರ್ಣ ಜವಾಬ್ದಾರಿಯು ಮುಖ್ಯ ಅಧೀಕ್ಷಕರಾಗಿ ನೇಮಕಗೊಂಡ ಅಧಿಕಾರಿಯದ್ದಾಗಿರುತ್ತದೆ. ಪರೀಕ್ಷಾ ಕಾರ್ಯಗಳಿಗಾಗಿ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಕೇಂದ್ರದಲ್ಲಿ ಉಪಸ್ಥಿತರಿರಬೇಕು. ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ಅನ್ಯ ವ್ಯಕ್ತಿಗಳು ಕೇಂದ್ರದೊಳಗೆ ಕಂಡುಬಂದಲ್ಲಿ ಮುಖ್ಯ ಅಧೀಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಒಟ್ಟು 6 ಜಾಗೃತದಳಗಳನ್ನು ರಚಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾಥರ್ಿಗಳಾಗಲಿ, ಸಿಬ್ಬಂದಿಯವರಾಗಲಿ ಮೊಬೈಲ್ ಫೋನ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಾಟರ್ ಬಾಯ್ಗಳ ನೇಮಕವನ್ನು ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು 2, 3 ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು. ಆಯಾ ದಿನದ ವಿಷಯ ಪರೀಕ್ಷೆಗಳು ಮುಗಿದ ತಕ್ಷಣವೇ ಉತ್ತರ ಪತ್ರಿಕೆಗಳನ್ನು ಕ್ರೂಢೀಕರಿಸಿ ಬಂಡಲುಗಳನ್ನು ಸೀಲು ರವಾನಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿದರ್ೇಶ ಗುರುಲಿಂಗಪ್ಪ ಮಿಣಜಗಿ ಇದ್ದರು.

ಕೋಟ್
ಜಿಲ್ಲೆಯ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಿಗೆ ಒಟ್ಟು 86 ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾಥರ್ಿಗಳನ್ನು ಜೋಡಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 10,813 ವಿದ್ಯಾಥರ್ಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಅರ್ಹರಾದ ಎಲ್ಲ ವಿದ್ಯಾಥರ್ಿಗಳ ಪ್ರವೇಶ ಪತ್ರಗಳನ್ನು ಈಗಾಗಲೇ ಆನ್ಲೈನ್ ಮೂಲಕ ಎಲ್ಲಾ ಕಾಲೇಜುಗಳಿಗೆ ವಿತರಿಸಲಾಗಿದೆ.
| ಎಂ.ಕೂಮರ್ಾರಾವ್
ಜಿಲ್ಲಾಧಿಕಾರಿ