More

    ರಾಹುಲ್​ ಗಾಂಧಿ ಅನರ್ಹತೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್​ನಿಂದ ಸಂಕಲ್ಪ ಸತ್ಯಾಗ್ರಹ

    ನವದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್​ ಅಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ.

    ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್​ಘಾಟ್​ನಲ್ಲಿ ನಡೆಯಲಿರುವ ಸಂಕಲ್ಪ ಸತ್ಯಾಗ್ರಹದ ನೇತೃತ್ವವನ್ನು ವಹಿಸಿದ್ದಾರೆ. ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದರೂ ಸಹ ಕಾಂಗ್ರೆಸ್​ ಬೃಹತ್​ ಪ್ರತಿಭಟನೆಗೆ ಹಮ್ಮಿಕೊಂಡಿದೆ.

    ರಾಹುಲ್​ ಗಾಂಧಿ ಅನರ್ಹತೆಯು ಒಂದು ಸಂಚು ಎಂದು ಕಾಂಗ್ರೆಸ್​ ಕರೆದಿದೆ. ಪ್ರಧಾನಿ ಮೋದಿ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಅವರನ್ನು ಮೌನಗೊಳಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದೆ. ತಮ್ಮ ಅನರ್ಹತೆಗೆ ಸಂಬಂಧಿಸಿದಂತೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು. ಲಂಡನ್‌ನಲ್ಲಿ ನೀಡಿದ ಹೇಳಿಕೆ ಮತ್ತು ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಮಯದಲ್ಲಿ ತಮ್ಮ ಹೇಳಿಕೆಗಳಿಗೆ ಏಕೆ ಕ್ಷಮೆಯಾಚಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್​, ಕ್ಷಮೆಯಾಚಿಸಲು ನಾನೇನು ಸಾವರ್ಕರ್​ ಅಲ್ಲ ಎಂದರು.

    ಇದನ್ನೂ ಓದಿ: ಅಪಘಾತದಲ್ಲಿ ಎಸ್​ಐ, ಪೇದೆ ಸಾವು ಪ್ರಕರಣ: ಪರಿಹಾರ ಕೊಡದ ಸರ್ಕಾರ, ಸಹೋದ್ಯೋಗಿಗಳಿಂದಲೇ ನೆರವು

    ಪ್ರಧಾನಿ ಮೋದಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಿದ್ದಾರೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದು ರಾಹುಲ್​ ಗಾಂಧಿ ಹೇಳಿದರು.

    ಕ್ಷಮೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿದ ರಾಹುಲ್​ ಗಾಂಧಿ, ನನ್ನ ಹೆಸರು ಸಾವರ್ಕರ್​ ಅಲ್ಲ. ನಾನು ಗಾಂಧಿ. ಯಾವುದೇ ಕಾರಣಕ್ಕೂ ಕ್ಷಮೆಯಾಚಿಸುವುದಿಲ್ಲ ಎಂದರು.

    2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಚಾರ ಮಾಡುವಾಗ ಮಾತನಾಡಿದ್ದ ರಾಹುಲ್​, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

    ರಾಹುಲ್ ಹೇಳಿಕೆಯಿಂದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಅಸಮಾಧಾನಗೊಂಡು ದೂರು ದಾಖಲಿಸಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರನ್ನು ಸೂರತ್​ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಇದರ ಅಡಿಯಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದರೆ, ಮೇಲ್ಮನವಿ ಸಲ್ಲಿಸಲು ರಾಹುಲ್​ ಅವರಿಗೆ ನ್ಯಾಯಾಲಯ 30 ದಿನಗಳ ಕಾಲಾವಕಾಶ ನೀಡಿದೆ. ಆದರೆ, ಸಂಸತ್ತಿನ ಕಾರ್ಯದರ್ಶಿ ರಾಹುಲ್​ ಅವರನ್ನು ಲೋಕಸಭಾ ಸದಸ್ಯತ್ವದಿಂದ ವಜಾಗೊಳಿಸಿದ್ದಾರೆ.

    ಇದನ್ನೂ ಓದಿ: 31ರೊಳಗೆ ಈ ಐದು ಕೆಲಸ ಮುಗಿಸಿ; ಬಾಕಿ ಇಟ್ಟರೆ ಆರ್ಥಿಕವಾಗಿ ನಷ್ಟ ಉಂಟಾಗುವ ಸಾಧ್ಯತೆ

    ಮಾನಹಾನಿ ಪ್ರಕರಣದಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​, 1951ರ ಜನಪ್ರತಿನಿಧಿ ಕಾಯ್ದೆ ಅಡಿಯಲ್ಲಿ 8 ವರ್ಷ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ. ಒಂದು ವೇಳೆ ಸೂರತ್​ ನ್ಯಾಯಾಲಯ ನೀಡಿರುವ ತೀರ್ಪನ್ನು ಉನ್ನತ ನ್ಯಾಯಾಲಯ ವಜಾಗೊಳಿಸಿದರೆ ರಾಹುಲ್​ ನಿರಾಳರಾಗಲಿದ್ದಾರೆ. ಇನ್ನು ರಾಹುಲ್​ರನ್ನು ಅನರ್ಹಗೊಳಿಸಿರುವ ನಿರ್ಧಾರ ಕೇಂದ್ರದ ರಾಜಕೀಯ ದ್ವೇಷ ಎಂದು ಆರೋಪ ಮಾಡಿದ್ದಾರೆ. (ಏಜೆನ್ಸೀಸ್​)

    ನಂಗೇನು ನಾಚಿಕೆ ಇಲ್ಲ! ಮೋದಿ ಕುರಿತ ಹಳೇ ಟ್ವೀಟ್ ವೈರಲ್​, ಸಮರ್ಥನೆ ನೀಡಿದ ಖುಷ್ಬೂ ಸುಂದರ್

    ಕ್ಷಮೆ ಕೇಳಲು ಸಾವರ್ಕರ್ ಅಲ್ಲ, ಹೋರಾಟ ನಿಲ್ಲಿಸುವುದಿಲ್ಲ; ಅನರ್ಹತೆ ಬಳಿಕ ರಾಹುಲ್ ಗಾಂಧಿ ಗುಡುಗು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts