ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಮೆಗಾಸ್ಟಾರ್​ ಚಿರಂಜೀವಿ!

Untitled design - 2023-08-15T180038.937
Published on

ನವದೆಹಲಿ: ಕಳೆದ ಕೆಲವು ದಿನಗಳಿಂದ ತೆಲುಗು ಚಿತ್ರರಂಗದ ಮೆಗಾಸ್ಟಾರ್, ನಟ ಚಿರಂಜೀವಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಇದೀಗ ಈ ಮಾಹಿತಿ ಅಧಿಕೃತವಾಗಿದ್ದು, ಚಿರಂಜೀವಿ ಇಂದು ದೆಹಲಿಗೆ ತೆರಳಿದ್ದಾರೆ. ಚಿಕಿತ್ಸೆ ಪಡದು ಒಂದು ವಾರಗಳ ಕಾಲ ದೆಹಲಿಯಲ್ಲೇ ವಿಶ್ರಾಂತಿ ಪಡೆದು ತದನಂತರ ಹೈದರಾಬಾದ್‌ಗೆ ಹಿಂತಿರುಗಲಿದ್ದಾರೆ ಎಂದು ಹೇಳಲಾಗಿದೆ.

ಹಲವು ದಿನಗಳಿಂದ ಈ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡಿತ್ತು. ಇದೀಗ ದೃಢವಾಗಿದ್ದು, ಚಿರಂಜೀವಿ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಹಿಂದೆ 'ಭೋಲಾ ಶಂಕರ್' ಚಿತ್ರದ ಪ್ರಚಾರದ ವೇಳೆ ನಟಿ ತಮನ್ನಾ ಭಾಟಿಯಾ, ಚಿರಂಜೀವಿ ಅವರಿಗೆ ಮೊಣಕಾಲು ನೋವು ಕಾಣಿಸಿಕೊಂಡಿದೆ ಎಂದು ಹೇಳುವ ಮೂಲಕ ಮುನ್ಸೂಚನೆ ಕೊಟ್ಟಿದ್ದರು.

ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಮೆಗಾಸ್ಟಾರ್ ಅಭಿಮಾನಿಗಳು, ತಮ್ಮ ನೆಚ್ಚಿನ ನಟ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಚಿರಂಜೀವಿ ನಟನೆಯ ಭೋಲಾ ಶಂಕರ್​ ಚಿತ್ರಮಂದಿರಗಳಲ್ಲಿ ಸಾಧಾರಣ ಪ್ರದರ್ಶನ ಕಾಣುತ್ತಿದ್ದು, ಮುಂದಿನ ಎರಡು ಹೊಸ ಸಿನಿಮಾಗಳ ಬಗ್ಗೆ ಶೀಘ್ರವೇ ಮಾಹಿತಿ ಹೊರಬೀಳಲಿದೆ ಎಂದು ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net