

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿಯಾದರೂ ಪಕ್ಷದ ಕಾರ್ಯಸೂಚಿಯನ್ನು ಪೂರೈಸಲು ಸಾಧ್ಯವಿಲ್ಲದಿರುವುದೇ ಸ್ಪರ್ಧೆಯಿಂದ ಹಿಂದೆ ಸರಿಯಲು ಕಾರಣ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ 2016ರಲ್ಲಿ 12 ಸಾವಿರ ಜನರ ಮೇಲಿದ್ದ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಂಡಿದ್ದೆ. ಪ್ರತ್ಯೇಕವಾದಿಗಳಿಗೆ ಪತ್ರ ಬರೆದು ಮಾತುಕತೆಗೆ ಆಹ್ವಾನಿಸಿದ್ದೆ. ಈಗ ಹಾಗೆ ಮಾಡಲು ಸಾಧ್ಯವೇ? ಸಿಎಂ ಆಗಿದ್ದಾಗ ಕದನ ವಿರಾಮವನ್ನು ತಂದಿದ್ದೆ. ಈಗ ಕದನ ವಿರಅಮ ತರಲು ಸಾಧ್ಯವೇ? ಮುಖ್ಯಮಂತ್ರಿಯಾಗಿ ಎಫ್ಐಆರ್ ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲವೆಂದಾದರೆ ಆ ಹುದ್ದೆಯಲ್ಲಿದ್ದು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುದಿಲ್ಲ ಎಂದು ಘೋಷಿಸಿ ಇದೀಗ ಮತ್ತೆ ತಮ್ಮ ನಿಲುವು ಬದಲಾಯಿಸಿದ ನ್ಯಾಷನಲ್ ಕಾನ್ಫರೆನ್ಸ್‌ನ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ಹಾಗೆ ನಿಮ್ಮ ನಿಲುವು ಬದಲಾಯಿಸಿಕೊಳ್ಳುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಒಬ್ಬ ಜವಾನನ ವರ್ಗಾವಣೆಗಾಗಿ ಗವರ್ನರ್ ಬಾಗಿಲಲ್ಲಿ ನಿಲ್ಲಬೇಕಾಗುತ್ತದೆ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಜವಾನನ ವರ್ಗಾವಣೆ ಮಾಡುವ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಆದರೆ ನಾವು ನಮ್ಮ ಪಕ್ಷದ ಕಾರ್ಯಸೂಚಿಯನ್ನು ಜಾರಿಗೆ ತರಬಹುದೇ ಎಂಬುದರ ಬಗ್ಗೆ ನಾನು ಯೋಚಿಸುತ್ತೇನೆ ಎಂದರು.
ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಕುರಿತು ಮಾತನಾಡಿದ ಅವರ, ಅಧಿಕಾರದ ಆಸೆಗಾಗಿ ಎರಡು ಪಕ್ಷಗಳು ಒಂದಾಗಿವೆ ಎಂದು ಟೀಕಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ. ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಚುನಾವಣೆಗಳು ನಡೆಯಲಿವೆ. ಅಕ್ಟೋಬರ್ 4 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸಿದ ನಂತರ ಮತ್ತು ಹಿಂದಿನ ರಾಜ್ಯದಿಂದ ಕಣಿವೆಯಲ್ಲಿ ಇದು ಮೊದಲ ಚುನಾವಣೆಯಾಗಿದೆ. 2019 ರಲ್ಲಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ.