

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಹತ್ವಕಾಂಕ್ಷೆಯ ಮೇಕೆದಾಟು ಪಾದಯಾತ್ರೆ ಇಂದು ಮರು ಚಾಲನೆ ಪಡೆದಿದ್ದು, ಸಾವಿರಾರು ಮಂದಿ ಹೆಜ್ಜೆ ಹಾಕುತ್ತಿದ್ದಾರೆ. ಈ ಯಾತ್ರೆಯಲ್ಲಿ ತುಮಕೂರು ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಆದರೀಗ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಶ್ರೀಗಳು ಡಿಕೆಶಿಗೆ ಪತ್ರ ಬರೆದಿದ್ದಾರೆ.
ಸಿದ್ಧಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಹಾಗಾಗಿ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ. ಕುಡಿಯುವ ನೀರಿನ ಪಾದಯಾತ್ರೆ ಯಶಸ್ವಿಯಾಗಿ ಆದಷ್ಟು ಬೇಗ ಯೋಜನೆ ಜಾರಿಯಾಗಲಿ. ರೈತಾಪಿ ಜನರಿಗೆ ಹಾಗೂ ಕುಡಿಯುವ ನೀರಿನ ಬವಣೆ ನಿಗಲೆಂದು ಹಾರೈಸುತ್ತೇನೆ ಎಂದು ಸಿದ್ದಲಿಂಗ ಶ್ರೀಗಳಳು ಪತ್ರದಲ್ಲಿ ವಿವರಿಸಿದ್ದಾರೆ.