ರಾಣೆಬೆನ್ನೂರ: ಗ್ರಾಹಕರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಆಮಿಷವೊಡ್ಡಿ ಅವರಿಂದ ಪಡೆದ 10.47 ಲಕ್ಷ ರೂ. ಹಣವನ್ನು ಕಂಪನಿಗೆ ಕಟ್ಟದೆ ಮೋಸ ಮಾಡಿರುವ ಕುರಿತು ಇಲ್ಲಿಯ ಶಹರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಹಿರೇಕೆರೂರ ತಾಲೂಕಿನ ಚಿಕ್ಕೇರೂರ ಗ್ರಾಮದ ನಿವಾಸಿ ಹಾಗೂ ನಗರದ ಸ್ಯಾಟಿನ್ ಕ್ರೇಡಿಟ ಕೇರ್ ನೆಟವರ್ಕ ಲಿಮಿಟೆಡ್ನ ಶಾಖಾ ವ್ಯವಸ್ಥಾಪಕ ಮೋಹನರಾಜ ನಾಗರಾಜಪ್ಪ ಕಿಳ್ಳಿಕ್ಯಾತರ (28) ಮೋಸ ಮಾಡಿರುವ ಆರೋಪಿ.
ಈತನ ವಿರುದ್ಧ ಕಂಪನಿಯ ರಿಜಿನಲ್ ಮ್ಯಾನೇಜರ್ ಚೌಡಪ್ಪ ಶರಣಪ್ಪ ಎಂಬುವರು ದೂರು ನೀಡಿದ್ದಾರೆ. ಆರೋಪಿಯು ಕಂಪನಿಯಿಂದ ಸಾಲ ಪಡೆದ ಸದಸ್ಯರಿಗೆ ಹೆಚ್ಚಿನ ಸಾಲ ಕೊಡುವ ನೆಪ ಹೇಳಿ 10.47 ಲಕ್ಷ ರೂ. ವಸೂಲಿ ಮಾಡಿಕೊಂಡು ಅದನ್ನು ಕಂಪನಿಗೆ ತುಂಬದೆ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸದಸ್ಯರ ಹಣ ಕಂಪನಿಗೆ ತುಂಬದೆ 10.47 ಲಕ್ಷ ರೂ. ಮೋಸ
You Might Also Like
Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?
ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…
World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ
ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…