ಸದಸ್ಯತ್ವ ಅಭಿಯಾನ ಪೂರ್ವಭಾವಿ ಸಭೆ

member
ಸದಸ್ಯತ್ವ ಅಭಿಯಾನದ ರಾಜ್ಯ ಸಮಿತಿ ಸದಸ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ನಡೆಸಿದರು
Published on

ಕುಂದಾಪುರ: ಸದಸ್ಯತ್ವ ಅಭಿಯಾನದ ರಾಜ್ಯ ಸಮಿತಿ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ನಡೆಸಿದರು.

ಸದಸ್ಯತ್ವ ಅಭಿಯಾನ ಯೋಜನೆ-ಯೋಚನೆ ಬಗ್ಗೆ ಮಾತನಾಡಿದ ಪ್ರತಾಪ್‌ಸಿಂಹ ನಾಯಕ್, ಅಟಲ್ ಬಿಹಾರಿ ವಾಜಪೇಯಿ ನೆನಪಿಗೋಸ್ಕರವಾಗಿ ಸದಸ್ಯತ್ವ ಅಭಿಯಾನ ಅಟಲ್ ಸದಸ್ಯತ್ವ ಪರ್ವ ಹೆಸರಿನಲ್ಲಿ ನಡೆಸಲಾಗುತ್ತಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಬೂತ್‌ನಲ್ಲಿ ಮಹಾ ಅಭಿಯಾನ ಮಾಡುವುದರ ಮೂಲಕ 60 ಸಾವಿರಕ್ಕೂ ಹೆಚ್ಚು ಸದಸ್ಯತ್ವ ಭಾರತೀಯ ಜನತಾ ಪಾರ್ಟಿ ಸದಸ್ಯರನ್ನಾಗಿ ಮಾಡಬೇಕು ಎಂದರು.

ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿದರು. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಸದಸ್ಯತ್ವ ಉಸ್ತುವಾರಿ ಮಟ್ಟಾರು ರತ್ನಾಕರ ಹೆಗ್ಡೆ, ಕುಂದಾಪುರ ಉಸ್ತುವಾರಿ ರಾಘವೇಂದ್ರ ಕುಂದರ್, ಉಡುಪಿ ಜಿಲ್ಲಾ ಸದಸ್ಯತ್ವ ಅಭಿಯಾನ ಸಹ ಸಂಚಾಲಕ ರಾಜೇಶ್ ಕಾವೇರಿ, ಮಂಡಲ ಸಂಚಾಲಕರದ ಕಾಡೂರು ಸುರೇಶ್ ಶೆಟ್ಟಿ, ಸಹ ಸಂಚಾಲಕ ಸುಧೀರ್ ಕೆ.ಎಸ್., ಸದಾನಂದ ಬಳ್ಕೂರು, ರೂಪ ಬಾಬು ಪೈ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net