ಬೈಂದೂರು: ದೇಶದಲ್ಲಿ ಬಿಜೆಪಿಯನ್ನು ಸದೃಢಗೊಳಿಸುವಲ್ಲಿ ಸದಸ್ಯತ್ವ ಅಭಿಯಾನ ಪ್ರಮುಖ ಪಾತ್ರವಹಿಸುತ್ತಿದೆ. ಶ್ರಮಿಕ ವರ್ಗ ಸೇರಿ ಎಲ್ಲರೂ ಬಿಜೆಪಿ ಸದಸ್ಯರಾಗುವ ಮೂಲಕ ದೊಡ್ಡ ಪ್ರಮಾಣದಲ್ಲಿ ಪಕ್ಷವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಕೊಲ್ಲೂರು ಪುರಾಣಿಕ ಸದನದಲ್ಲಿ ಬುಧವಾರ ಬೈಂದೂರು ಬಿಜೆಪಿ ಮಂಡಲ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕರ್ತರ ಹೋರಾಟದ ಪ್ರತಿಫಲದಿಂದ ಬಿಜೆಪಿ ವಿಶ್ವದಲ್ಲಿಯೇ ಅತಿ ದೊಡ್ಡ ಸದಸ್ಯತ್ವ ಹೊಂದಿದ ಪಕ್ಷವಾಗಿದೆ. ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಜನರ ತೆರಿಗೆ ಹಣದಲ್ಲಿ ಬೇರೆಬೇರೆ ಕಾರ್ಯಕ್ರಮ ಜಾರಿಗೆ ತರುತ್ತಿದೆ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಶಾಸಕ ಗುರುರಾಜ್ ಗಂಟಿಹೊಳೆ, ಮಂಡಲ ಅಧ್ಯಕ್ಷ ನೆಲ್ಯಾಡಿ ದೀಪಕ್ ಶೆಟ್ಟಿ, ಕೃಷ್ಣಪ್ರಸಾದ್ ಅಡ್ಯಂತಾಯ, ಮಹೇಂದ್ರ ಪೂಜಾರಿ, ರಮೇಶ ಪೂಜಾರಿ, ಆನಂದ ಖಾರ್ವಿ, ಪ್ರಿಯದರ್ಶಿನಿ ಬೆಸ್ಕೂರು, ಶಿವರಾಜ್ ಪೂಜಾರಿ, ಅನೇಕ ಮುಖಂಡರು ಉಪಸ್ಥಿತರಿದ್ದರು.