ವಿದ್ಯುತ್ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸಲು ಸಚಿವರಿಗೆ ಮನವಿ

download
Published on

ಮಂಗಳೂರು : ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ಇದರ ದ.ಕ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ವಿದ್ಯುತ್ ಗುತ್ತಿಗೆದಾರರ ಹಾಗೂ ಗ್ರಾಹಕರ ಸಮಸ್ಯೆಗಳ ಬಗ್ಗೆ ಮನವಿ ನೀಡಿದರು.
ಒಂದು ವರ್ಷಗಳಿಂದ ವಿದ್ಯುತ್ ಮೀಟರ್‌ಗಳ ಕೊರತೆಯಿಂದ ಹೊಸ ವಿದ್ಯುತ್ ಜೋಡಣೆಗಳಿಗೆ ವಿಳಂಬ, ಮೆಸ್ಕಾಂ ಜಿಲ್ಲಾ ವ್ಯಾಪ್ತಿಯಲ್ಲಿ ಉಪವಿಭಾಗ, ಸೆಕ್ಷನ್ ವಿಭಾಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರ ಭರ್ತಿಗೆ ವಿನಂತಿಸಲಾಯಿತು.
ಲೋಕೋಪಯೋಗಿ ಇಲಾಖೆ , ಜಿಲ್ಲಾ ಪಂಚಾಯಿತಿ ಹಾಗೂ ಇತರ ಇಲಾಖಾ ಕಾಮಗಾರಿಗಳನ್ನು ಟೆಂಡರ್ ನೀಡುವಾಗ ವಿದ್ಯುತ್ ಕಾಮಗಾರಿಯನ್ನು ಪ್ರತ್ಯೇಕವಾಗಿಸಿ ವಿದ್ಯುತ್ ಗುತ್ತಿಗೆದಾರರಿಗೆ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net