

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ವತಿಯಿಂದ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆ ‘ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ನೆಂಪುನ ಜಂಬರ’ ಕಾರ್ಯಕ್ರಮ ಅಮೈಮಡಿಯಾರು ಶಾಲಾ ವಠಾರದಲ್ಲಿ ನಡೆಯಿತು.
ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅವರ ಕರ್ಮಭೂಮಿಯಲ್ಲೇ ಆದರೆ ಅವರಿಗೆ ಇನ್ನಷ್ಟು ಗೌರವ ಸಿಕ್ಕಿದಂತಾಗುತ್ತದೆ. ಅದಕ್ಕಾಗಿ ಉಬರಡ್ಕದಲ್ಲೇ ಅವರ ಪ್ರತಿಮೆ ಆಗುವಲ್ಲಿ ಸರ್ಕಾರದ ವತಿಯಿಂದ ನಾವು ಪ್ರಯತ್ನ ಮಾಡುತ್ತೇವೆ. ಸ್ಥಳೀಯಾಡಳಿತ ಸೂಕ್ತ ಜಾಗ ಗುರುತಿಸಬೇಕು ಎಂದರು.
ಮಿತ್ತೂರು ಉಳ್ಳಾಕುಲು ನಾಯರ್ ದೈವಸ್ಥಾನದ ಆಡಳಿತ ಮೊಕ್ತೇಸರ ವೆಂಕಟ್ರಮಣ ಗೌಡ ಕೆದಂಬಾಡಿ ಉದ್ಘಾಟಿಸಿದರು. ಸಾಹಿತಿ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡಿದರು. ಉಬರಡ್ಕ ಮಿತ್ತೂರು ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಸೂಂತೋಡು, ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಸುಳ್ಯ ಗೌಡರ ಯುವ ಸೇವಾ ಸಂಘ ಅಧ್ಯಕ್ಷ ಪಿ.ಎಸ್.ಗಂಗಾಧರ, ಉಬರಡ್ಕ ಮಿತ್ತೂರು ಜ್ಞಾನಧಾಮ ಚಾರಿಟೆಬಲ್ ಟ್ರಸ್ಟ್ ಸಂಚಾಲಕ ದಾಮೋದರ ಗೌಡ ಮದುವೆಗದ್ದೆ, ಉಬರಡ್ಕ ಗ್ರಾಪಂ ಉಪಾಧ್ಯಕ್ಷೆ ಚಿತ್ರಾಕುಮಾರಿ ಪಾಲಡ್ಕ, ಮಂಗಳೂರು ಸ್ವಾತಂತ್ರೃ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ಸುರೇಶ್ ಎಂ.ಎಚ್., ಅಮೈಮಡಿಯಾರು ಎಸ್ಡಿಎಂಸಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಅಮೈಮಡಿಯಾರು ವಿನಾಯಕ ಮಿತ್ರ ಬಳಗ ಅಧ್ಯಕ್ಷ ವಿದ್ಯಾಧರ ಹರ್ಲಡ್ಕ, ನಿವೃತ್ತ ಸೈನಿಕ ಅಡ್ಡಂತಡ್ಕ ದೇರಣ್ಣ ಗೌಡ, ಮುಖ್ಯಶಿಕ್ಷಕಿ ರಾಮಕ್ಕ ಇದ್ದರು.
ಅಮೈಮಡಿಯಾರು ಶಾಲಾ ದ್ವಾರದ ಬಳಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟ ಕುರಿತಾಗಿ ಚಿತ್ರಿಸಲಾದ ಉಬ್ಬು ಚಿತ್ರದ ಬಳಿ ಕೆದಂಬಾಡಿ ರಾಮಯ್ಯ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಸಭಾ ವೇದಿಕೆ ತನಕ ಮೆರವಣಿಗೆ ನಡೆಯಿತು.
ಸವಿತಾ ಸಂದೇಶ್ ನಡುಮುಟ್ಲು ಪ್ರಾರ್ಥಿಸಿದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು.