More

    ಕಾಂಗ್ರೆಸ್ ಸರ್ಕಾರದ ಮುಟ್ಟಾಳತನ ಪ್ರದರ್ಶನ

    ಹುಬ್ಬಳ್ಳಿ : ಶಾಲೆ, ಹಾಸ್ಟೆಲ್​ಗಳಲ್ಲಿ ’ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂಬುದನ್ನು ಬರೆಯಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಟ್ಟಾಳತನ ಪ್ರದರ್ಶಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬನ್ನಿ ಎಂಬ ಘೋಷವಾಕ್ಯವನ್ನು ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ ಎಂದು ಬದಲಾಯಿಸಿರುವುದು ಕಾಂಗ್ರೆಸ್​ನ ತುಷ್ಠೀಕರಣದ ಪರಮಾವಧಿ ಎಂದು ಟೀಕಿಸಿದರು.

    ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬನ್ನಿ ಎಂಬುದು ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯ. ಅದನ್ನು ತಿದ್ದುಪಡಿ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಕುವೆಂಪು ಅವರಿಗೆ ಅವಮಾನ ಮಾಡಿದೆ. ಕಾಂಗ್ರೆಸ್ ಸರ್ಕಾರದ ದೃಷ್ಟಿಯಲ್ಲಿ ಕುವೆಂಪು ಜಾತ್ಯಾತೀತರಲ್ಲವೇ? ಎಂದು ಪ್ರಶ್ನಿಸಿದರು.

    ಕುವೆಂಪು ಅವರ ಘೋಷವಾಕ್ಯ ಬದಲಾಯಿಸಿರುವ ಕಾಂಗ್ರೆಸ್ ಸರ್ಕಾರದ ನಡೆ ಹಿಂದು ವಿರೋಧಿ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

    ರಾಜ್ಯ ಸರ್ಕಾರ ತುಷ್ಠೀಕರಣದ ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಯಾವ ಹಂತಕ್ಕೆ ತುಷ್ಠೀಕರಣ ಮಾಡುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

    ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳನ್ನು ಕಾಂಗ್ರೆಸ್ ಸರ್ಕಾರ ಅಮಾಯಕರು ಎಂದಿದ್ದು, ಇದನ್ನು ಪ್ರಶ್ನಿಸಲು ನೀವ್ಯಾರು ಎಂದು ಸಚಿವ ಜೋಶಿ, ಸರ್ಕಾರವನ್ನು ಪ್ರಶ್ನಿಸಿದರು.

    ಗಲಭೆ ಪ್ರಕರಣದ ನೂರಾರು ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಮುಖಂಡರು ಪ್ರಯತ್ನಿಸುತ್ತಿದ್ದರು. ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಾಗ ಸರಿಯಾಗಿ ವಾದ ಮಂಡಿಸಲಿಲ್ಲ. ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸರ್ಕಾರ ಸಹಕರಿಸಿದೆ ಎಂದು ದೂರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts