More

    ಮಾನಸಿಕ ಆರೋಗ್ಯದತ್ತ ಗಮನಹರಿಸಿ

    ಬಳ್ಳಾರಿ: ಲಾಭ-ನಷ್ಟ, ಸುಖ-ದುಃಖವನ್ನು ಸಮನಾಗಿ ಸ್ವೀಕರಿಸುವ ಮೂಲಕ ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಒತ್ತಡವನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಹೇಳಿದರು.

    ಇಲ್ಲಿನ ಗುಗ್ಗರಹಟ್ಟಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಸಹಯೋಗದೊಂದಿಗೆ ಮಾನಸಿಕ ಆರೋಗ್ಯಕ್ಕಾಗಿ ಒತ್ತಡ ನಿರ್ವಹಣೆ ಕುರಿತು ಕಾರ್ಮಿಕರಿಗೆ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪ್ರಸ್ತುತ ದಿನಗಳಲ್ಲಿ ಕುಟುಂಬದ ನಿರ್ವಹಣೆ, ಕೆಲಸ ಹಾಗೂ ಸಹದ್ಯೋಗಿಗಳೊಂದಿಗಿನ ವರ್ತನೆಗಳು ಒತ್ತಡಕ್ಕೆ ಕಾರಣವಾಗುವ ಸಾಧ್ಯತೆಗಳಿವೆ. ಆದ್ದರಿಂದ ಯಾವುದೇ ಕಠಿಣ ಪರಿಸ್ಥಿತಿಗಳು ಎದುರಾದರೂ ಒಂಟಿಯಾಗಿರದೆ ಒತ್ತಡ ನಿಯಂತ್ರಣಕ್ಕೆ ಇತರರ ಜೊತೆ ಮುಕ್ತವಾಗಿ ಬೆರೆತು ಮಾತನಾಡಬೇಕು ಎಂದು ಸಲಹೆ ಮಾಡಿದರು.

    ಮನೋರೋಗ ತಜ್ಞ ಡಾ.ರೋಹನ್ ವನಗುಂದಿ ಮಾತನಾಡಿ, ಪ್ರತಿಯೊಬ್ಬರಿಗೂ ಸಮಸೆಯಗಳಿರುತ್ತವೆ. ಅವುಗಳಿಂದ ಹೊರಬರಲು ಪ್ರತಿದಿನ ಕನಿಷ್ಟ ಅರ್ಧ ಗಂಟೆ ಸಂಗೀತ, ಕ್ರೀಡೆ, ವ್ಯಾಯಾಮ, ಧ್ಯಾನ, ಯೋಗ ಹಾಗೂ ಇತರೆ ಸಮಾಜ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡರೆ ಒತ್ತಡದಿಂದ ಹೊರಬರಬಹುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts