More

    ಮಿದುಳು ಆರೋಗ್ಯ ಸೇವೆಗೆ ಚಾಲನೆ : ಸಚಿವ ದಿನೇಶ್ ಗುಂಡೂರಾವ್ 

    ಬೆಂಗಳೂರು: ರಾಜ್ಯಾದ್ಯಂತ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮಿದುಳು ಆರೋಗ್ಯ ಕೇಂದ್ರಗಳನ್ನು ತೆರೆಯುವ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ತಗ್ಗಿಸಲಾಗಿದ್ದು, ಇನ್ನುಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಮಿದುಳು ಹಾಗೂ ನರ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

    ನಿಮ್ಹಾನ್ಸ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೋಮವಾರ ಬೆಂಗಳೂರು ಸೇರಿ ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಮಿದುಳು ಆರೋಗ್ಯ ಸೇವೆಗೆ ಚಾಲನೆ ನೀಡಿ ಮಾತನಾಡಿದರು. ನೂತನ 33 ಕೇಂದ್ರಗಳು ನಿಮ್ಹಾನ್ಸ್ ಸಲಹೆಗಳೊಂದಿಗೆ ರೋಗಿಗಳಿಗೆ ಚಿಕಿತ್ಸೆ ಒದಗಿಸಲಿವೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದವರನ್ನು ನಿಮ್ಹಾನ್ಸ್ ತಜ್ಞರ ಸಲಹೆ ಮೇರೆಗೆ ಇತರ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು.

    ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಮತ್ತಿತರ ಕಾಯಿಲೆಗಳು ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇವನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಶ್ರಮಿಸಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಶ್ರವಣ ತಜ್ಞರು, ಮನಶಾಸ್ತ್ರಜ್ಞರು, ಶುಶ್ರೂಷಕರು ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ ಎಂದು ಮಾಹಿತಿ ನೀಡಿದರು.

    ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ.ವೈ. ನವೀನ್ ಭಟ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts