ಕ್ರೀಡಾಕೂಟಗಳಿಂದ ಮಾನಸಿಕ ಸ್ಥೈರ್ಯ

sports
ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಖೋಖೋ ಪಂದ್ಯಾಟವನ್ನು ಕೆ.ರಾಮನಾಥ ನಾಯಕ್ ಉದ್ಘಾಟಿಸಿದರು
Published on

ಗಂಗೊಳ್ಳಿ: ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತವರು ಕುಗ್ಗದೆ, ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ಗೆಲುವಿಗೆ ಶ್ರಮಿಸಬೇಕು ಎಂದು ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಕೆ.ರಾಮನಾಥ ನಾಯಕ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಎಸ್‌ವಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಬುಧವಾರ ನಡೆದ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಖೋಖೋ ಟೂರ್ನಿ ಬುಧವಾರ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್, ಸಮಿತಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಸ್ತಾವನೆಗೈದರು. ಲಕ್ಷ್ಮೀ ಖಾರ್ವಿ ವಂದಿಸಿದರು. ಮಾಲಾಶ್ರೀ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net