VIDEO| ಧಾರ್ಮಿಕ ಭಾವನೆಗೆ ಧಕ್ಕೆ; ಮಾನಸಿಕ ಅಸ್ವಸ್ಥೆ ಮೇಲೆ ಮನಸೋಇಚ್ಛೆ ಹಲ್ಲೆ

Jaipur Assault
Published on

ಜೈಪುರ: ಆಘಾತಕಾರಿ ಘಟನೆಯೊಂದರಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಗುಂಪೊಂದು ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಜೈಪುರದ ಸಂಗ್ನೇರ್​ನಕಲ್ಲಿರುವ ಕಲ್ಯಾಣ್​ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಗಾಯಗೊಂಡಿರುವ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯ ಹಿನ್ನಲೆ

ಜೈಪುರದ ಸಂಗ್ನೇರ್​ನ ಮಾಲ್ಪುರ ಪೊಲೀಸ್​ ಠಾಣಾ ವ್ಯಾಪ್ತಿಯ ಕಲ್ಯಾಣ್​ ಕಾಲೋನಿಯಲ್ಲಿ ವಾಸಿಸುವ ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದು, ಮೊದಲಿಗೆ ತಮ್ಮ ಮನೆಯ ಮೇಲೆ ಬಿಜೆಪಿ ಪಕ್ಷದ ಚಿಹ್ನೆಯನ್ನು ಬಿಡಿಸಿ ಧರ್ಮ ಒಂದರ ಕುರಿತು ಅವಹೇಳನಕಾರಿಯಾಗಿರುವ ಪೋಸ್ಟರ್​ಗಳನ್ನು ಅಂಟಿಸಿದ್ದರು.

ಕೆಲ ದಿನಗಳ ಬಳಿಕ ಮುಸ್ಲಿಂ ಪವಿತ್ರ ಗ್ರಂಥವಾದ ಕುರಾನ್​ಅನ್ನು ಮಹಿಳೆ ಸುಟ್ಟು ಹಾಕಿದ್ದರು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಎಂದು ಹೇಳಲಾಗಿದೆ. ಇದರಿಂದ ಉದ್ರಿಕ್ತಗೊಂಡ ಜನ ಮಹಿಳೆಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಾಲ್ಪುರ ಪೊಲೀಸ್​ ಠಾಣಾ ಸಿಬ್ಬಂದಿ ಮಹಿಳೆಯನ್ನು ಗುಂಪಿನಿಮದ ರಕ್ಷಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ಸಂಬಂಧ ಪೊಲೀಸರು ನಾಸಿರುದ್ದೀನ್​, ರಶೀದ್​, ಮುಷ್ತಾಕ್​, ಇರ್ಫಾನ್​ ಖಾನ್​, ಅಜಾಸ್​ ಖಾನ್​, ಇಕ್ರಂ ದೇಶವಾಲಿ, ಕಲಾಮುದ್ದೀನ್​ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net