

ಬಂಟ್ವಾಳ: ವಿದ್ಯಾರ್ಥಿಗಳು ಶಾಲೆಯಂತೆ ಮನೆಯಲ್ಲೂ ಶೈಕ್ಷಣಿಕ ವಾತಾವರಣ ಸೃಷ್ಟಿ ಮಾಡಬೇಕು, ಇನ್ನು ಉಳಿದಿರುವಂಥ ಸಮಯವನ್ನು ಪರೀಕ್ಷೆಗಾಗಿ ತ್ಯಾಗ ಮಾಡಬೇಕು. ಪರೀಕ್ಷೆ ಕೇವಲ ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲ ತಮಗೂ ಎನ್ನುವುದನ್ನು ಪಾಲಕರೂ ಮನಗಾಣಬೇಕು ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದರು.
ಬಿ.ಸಿ.ರೋಡಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ, ಪಿಯು ಶಿಕ್ಷಣ ಭವಿಷ್ಯದ ಅವಕಾಶಗಳು ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡಿದರು.
ಮಕ್ಕಳು, ಪಾಲಕರು, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ನಾಲ್ಕು ಮಂದಿಯ ಒಡಂಬಡಿಕೆ, ನಾಲ್ಕು ಮಂದಿಯೂ ಪ್ರಯತ್ನ ಮಾಡಿದರೆ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಸಾಧ್ಯ ಎಂದರು.
ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಂ ಪೂಜಾರಿ, ರೋಟರಿ ಕ್ಲಬ್ ಮಾಜಿ ಗವರ್ನರ್ ಪ್ರಕಾಶ್ ಕಾರಂತ್, ಉದ್ಯಮಿ ಭುವನೇಶ್ ಪಚ್ಚಿನಡ್ಕ, ಹರಿಕೃಷ್ಣ ಬಂಟ್ವಾಳ, ಸುದರ್ಶನ್ ಜೈನ್, ತಾರಾನಾಥ ಕೊಟ್ಟಾರಿ ತೇವು, ಉಮೇಶ್ ಬೆಂಜನಪದವು, ಸಚ್ಚಿದಾನಂದ ಶೆಟ್ಟಿ, ಅನಿಲ್ ಮಸ್ಕರೇನಸ್ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕು ಬಂಟರ ಸಂಘ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಸ್ವಾಗತಿಸಿ, ಜಗನ್ನಾಥ ಚೌಟ ವಂದಿಸಿದರು. ಉಪನ್ಯಾಸಕ ವೇಣುಗೋಪಾಲ ನಿರೂಪಿಸಿದರು.