20.8 C
Bangalore
Sunday, December 8, 2019

ಮೆಸ್ಕಾಂಗೆ ರೂ.11 ಕೋಟಿ ನಷ್ಟ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಮಂಗಳೂರು:  ಪ್ರಾಕೃತಿಕ ವಿಕೋಪದಿಂದ ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಮೆಸ್ಕಾಂಗೆ 11 ಕೋಟಿ ರೂ. ನಷ್ಟ ಉಂಟಾಗಿದೆ.

ಭೂ ಕುಸಿತ ಹಾಗೂ ಗಾಳಿ, ಮಳೆಗೆ ಮರಗಳು ಮುರಿದು ಬಿದ್ದ ಪರಿಣಾಮ ಉಭಯ ಜಿಲ್ಲೆಯಲ್ಲಿ 7,678 ವಿದ್ಯುತ್ ಕಂಬ ಮುರಿದು ಬಿದ್ದಿವೆ. 716 ವಿದ್ಯುತ್ ಪರಿವರ್ತಕ(ಟ್ರಾನ್ಸ್‌ಫಾರ್ಮರ್)ಹಾನಿಗೀಡಾಗಿದೆ. 285 ಕಿ.ಮೀ. ಉದ್ದದ ವಿದ್ಯುತ್ ಲೈನ್ ಹಾನಿಗೊಂಡಿದೆ.

ಮೆಸ್ಕಾಂ ಸಿಬ್ಬಂದಿ ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ ನಡೆಸಿದ್ದು ಶೇ.90 ವಿದ್ಯುತ್ ಕಂಬ ಮತ್ತು ಪರಿವರ್ತಕಗಳನ್ನು ಬದಲಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೀವ್ರ ಹಾನಿಗೀಡಾದ ಬೆಳ್ತಂಗಡಿ ಮತ್ತು ಪುತ್ತೂರಿನ ಕೆಲವು ಭಾಗಗಳಲ್ಲಿ ತಕ್ಷಣ ದುರಸ್ತಿ ಕಾರ್ಯ ಸಾಧ್ಯವಾಗಿಲ್ಲ.

ದ.ಕದಲ್ಲಿ 7.76 ಕೋಟಿ ರೂ. ನಷ್ಟ : ಮೆಸ್ಕಾಂಗೆ ದ.ಕ.ಜಿಲ್ಲೆಯಲ್ಲಿ ಏ.1ರಿಂದ ಆ.12ರವರೆಗೆ 7.76 ಕೋಟಿ ರೂ. ಹಾಗೂ ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ 3.26 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ದ.ಕ.ಜಿಲ್ಲೆಯಲ್ಲಿ 4733 ವಿದ್ಯುತ್ ಕಂಬ ಮುರಿದಿದ್ದು, ಈ ಪೈಕಿ ಬೆಳ್ತಂಗಡಿ ತಾಲೂಕಿನಲ್ಲಿ 1137 ಕಂಬ ಮುರಿದಿದೆ. 372 ವಿದ್ಯುತ್ ಪರಿವರ್ತಕಕ್ಕೆ ಹಾನಿಯಾಗಿದ್ದು 2.18 ಕೋಟಿ ರೂ. ನಷ್ಟ ಉಂಟಾಗಿದೆ. 217 ಕಿ.ಮೀ.ಉದ್ದದ ವಿದ್ಯುತ್ ಲೈನ್‌ಗೆ ಹಾನಿಯಾಗಿದ್ದು, ಈಗ 189.89 ಕಿ.ಮೀ. ದುರಸ್ತಿಯಾಗಿದೆ. ಹಾನಿಯಾದ ವಿದ್ಯುತ್ ಕಂಬದಲ್ಲಿ 4303 ಕಂಬ ಬದಲಾಯಿಸಲಾಗಿದೆ. 367 ವಿದ್ಯುತ್ ಪರಿವರ್ತಕ ದುರಸ್ತಿಯಾಗಿದೆ.

ಉಡುಪಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗೆ ಹಾನಿ
ಉಡುಪಿ ಜಿಲ್ಲೆಯಲ್ಲಿ 344 ವಿದ್ಯುತ್ ಪರಿವರ್ತಕ ಮತ್ತು 2945 ವಿದ್ಯುತ್ ಕಂಬ ಹಾನಿಗೀಡಾಗಿದೆ. 78.88 ಕಿ.ಮೀ ಉದ್ದದ ವಿದ್ಯುತ್ ಮಾರ್ಗ ಹಾನಿಗೊಂಡಿದೆ. ಈ ಪೈಕಿ ಕಳೆದ 12 ದಿನಗಳಲ್ಲಿ 1183 ಕಂಬ ಹಾಗೂ 37.96 ಕಿ.ಮೀ.ಉದ್ದದ ವಿದ್ಯುತ್ ಮಾರ್ಗ ಹಾನಿಗೀಡಾಗಿದ್ದು ಈಗ ಶೇ. 90ರಷ್ಟು ದುರಸ್ತಿ ಕಾರ್ಯ ಪೂರ್ಣವಾಗಿದೆ. ಉಳಿದೆಡೆ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಉಡುಪಿ ಮೆಸ್ಕಾಂ ಅಧೀಕ್ಷಕ ನರಸಿಂಹ ಪಂಡಿತ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...