ನ.26ರಂದು ಮೆಸ್ಕಾಂ ಜನ ಸಂಪರ್ಕ ಸಭೆ

Published on

ಮಂಗಳೂರು: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆಯು ಸುಳ್ಯ ಉಪವಿಭಾಗ ಕಚೇರಿಯಲ್ಲಿ ನ.26ರಂದು ಸಮಯ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ. 08257-231399 ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net