More

    ಬಲ್ಕ್ ಎಸ್‌ಎಂಎಸ್ ಮೂಲಕ ಮತದಾರರ ಮೊಬೈಲ್​​ಗಳಿಗೆ ಸಂದೇಶ

    ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿರುವ ಮತದಾರರ ಮೊಬೈಲ್ ಗಳಿಗೆ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್‌ಎಂಎಸ್ ಮೂಲಕ ಏ.26ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಹಿಸಲಾಗುವುದು ಎಂದು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.

    ಲೋಕಸಭಾ ಚುನಾವಣೆ ಸಂಬಂಧ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆಯಾ ವಲಯಗಳಲ್ಲಿ ತಳ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

    ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಆಸ್ತಿತೆರಿಗೆ ಪಾವತಿಸುವವರ ಮಾಹಿತಿಯು ಪಾಲಿಕೆಯ ಕಂದಾಯ ವಿಭಾಗದಲ್ಲಿ ಲಭ್ಯವಿದ್ದು, ಅದರನುಸಾರ ಎಲ್ಲರಿಗೂ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್‌ಎಂಎಸ್ ಮೂಲಕ ಮತದಾನ ದಿನದಂದು ಮತ ಚಲಾಯಿಸಲು ಸಂದೇಶ ಕಳುಹಿಸಲಾಗವುದು ಎಂದು ಹೇಳಿದರು.

    ಸಕ್ಷಮ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಿ:

    ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಂಗವಿಕಲರು ಹಾಗೂ ಹಿರಿಯ ನಾಗರಿಕರು ಸಕ್ಷಮ್ ತಂತ್ರಾಂಶದ ಮೂಲಕ ಸಾರಿಗೆ ವ್ಯವಸ್ಥೆ ಅವಶ್ಯಕತೆ ಇರುವವರು ಮುಂಚಿತವಾಗಿಯೇ ಕಾಯ್ದಿರಿಸಿಕೊಳ್ಳುವ ಸಲುವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

    ಅದರಂತೆ, ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಸಕ್ಷಮ್ ತಂತ್ರಾಂಶದಲ್ಲಿ ಏ.24ರ ಸಂಜೆ 5 ಗಂಟೆಯವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಸಂಬಂಧಪಟ್ಟ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಗಳು ಅದಕ್ಕೆ ಸೂಕ್ತ ಕ್ರಮ ವಹಿಸಲಿದ್ದಾರೆ ಎಂದು ತುಷಾರ್ ಗಿರಿನಾಥ್ ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts