ಮೇಟಗಳ್ಳಿ ಜೆಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ

Metagalli JSS English Medium School Student Union Inauguration
Published on

ಮೈಸೂರು: ಮೇಟಗಳ್ಳಿಯ ಜೆಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಏರ್ಪಡಿಸಲಾ ಗಿತ್ತು.

ಮೈಸೂರು ವಿಶ್ವವಿದ್ಯಾಲಯದ ರೇಷ್ಮೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರ್.ಎಸ್. ಉಮಾಕಾಂತ್ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳಿಂದ ಕಲಿಯುವುದಕ್ಕಿಂತ ಹೆಚ್ಚಾಗಿ ಪಠ್ಯೇತರ ಚಟುವಟಿಕೆಗಳಿಂದ ಕಲಿಯುತ್ತಾರೆ. ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಯಿಂದ ಮಕ್ಕಳಲ್ಲಿ ನಾಯಕತ್ವದ ಗುಣಗಳು ಬೆಳವಣಿಗೆಯಾಗುತ್ತವೆ ಎಂದರು.

ಮೇಟಗಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಾಂತರಾಮ್ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತು, ಸಂಸ್ಕಾರ ಬೆಳೆಸಿಕೊಳ್ಳಬೇಕು. ಈ ರೀತಿಯ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಚುನಾವಣೆ ಪ್ರಕ್ರಿಯೆ ಬಗ್ಗೆ ಅರಿವು ಮೂಡುತ್ತದೆ ಎಂದು ಹೇಳಿದರು.

ವಿದ್ಯಾರ್ಥಿ ಸಂಘದ ಚುನಾಯಿತ ಸದಸ್ಯರಿಗೆ ಸಹಶಿಕ್ಷಕಿ ಎನ್. ದೀಪಾ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯೋಪಾಧ್ಯಾಯ ಎನ್.ಪಿ ಸತೀಶ್, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದೀಪಾ ಪ್ರಶಾಂತ್, ಸಹ ಕಾರ್ಯದರ್ಶಿ ಜಿ. ಶಿವಸ್ವಾಮಿ, ನರ್ಸರಿ ಶಿಕ್ಷಕಿ ಬಿ.ಮಂಜುಳಾ, ದೈಹಿಕ ಶಿಕ್ಷಣ ಶಿಕ್ಷಕ ಆರ್. ಪ್ರಭುಸ್ವಾಮಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net