More

    ರಾಜ್ಯದಲ್ಲಿ ಇಂದಿನಿಂದ ಸಾಧಾರಣ ಮಳೆ; ಹವಾಮಾನ ಇಲಾಖೆ ಸೂಚನೆ

    ಬೆಂಗಳೂರು: ಬಿಸಿಲ ಧಗೆ ಹೆಚ್ಚುತ್ತಿರುವ ನಡುವೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಂಗಳವಾರದಿಂದ ಐದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಮಾ.14ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ಇದನ್ನೂ ಓದಿ: ಗಂಡನ ಮನೆಯಲ್ಲಿದ್ದ ಚಿನ್ನ ಕದ್ದ ನವವಿವಾಹಿತೆ ಪ್ರಿಯಕರನೊಂದಿಗೆ ಪರಾರಿ!

    ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವೆಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ.

    ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇದನ್ನೂ ಓದಿ: ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts