ಸ್ಯಾಂಡಲ್​ವುಡ್​ನಲ್ಲಿ ಮತ್ತೆ #METOO ಬಿರುಗಾಳಿ; ಸಿಎಂಗೆ ಸುದೀಪ್,ರಮ್ಯಾ ಸೇರಿ 153 ಮಂದಿ ಪತ್ರ

Sudeep Ramya Siddu

ಬೆಂಗಳೂರು: ಇಡೀ ಮಲಯಾಳಂ ಚಿತ್ರರಂಗವನ್ನೇ ಬುಡಮೇಲು ಮಾಡಿರುವ ಜಸ್ಟಿಸ್​ ಹೇಮಾ ಸಮಿತಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕರ ವಿರುದ್ಧ ನಟಿಯರು ಸರಣಿ ಆರೋಪಗಳನ್ನು ಮಾಡುತ್ತಿದ್ದು, ಚಿತ್ರರಂಗದಲ್ಲಿ ನಟಿಯರು ಅನುಭವಿಸುತ್ತಿರುವ ಲೈಂಗಿಕ ಕಿರುಕುಳ ಹಗರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಹೇಮಾ ಸಮಿತಿ ವರದಿ ಸಲ್ಲಿಸಿದ ಬೆನ್ನಲ್ಲೇ ಬೇರೆ ಚಿತ್ರರಂಗಗಳ ನಟ-ನಟಿಯರು ತಮ್ಮ ಚಿತ್ರರಂಗದಲ್ಲಿನ ಪರಿಸ್ಥಿತಿಗಳ ಬಗ್ಗೆಯೂ ವರದಿ ಸಲ್ಲಿಸುವಂತೆ ಆಗ್ರಹಿಸುತ್ತಿದ್ದು, #METOO ಅಭಿಯಾನ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಕೆಲ ದಿನಗಳ ಹಿಂದಷ್ಟೇ  ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದ ಖ್ಯಾತ ನಟ-ನಟಿಯರು ತಮ್ಮ ತ್ರರಂಗದಲ್ಲೂ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ಹಾಗೂ ಇತರೆ ಸಮಸ್ಯೆಗಳನ್ನು ಅಧ್ಯಯನ ಆಗಬೇಕೆಂದು ಒತ್ತಾಯಿಸಿದ್ದರು. ಇದಕ್ಕೆ ಹಲವರು ದನಿಗೂಡಿಸಿದ್ದರು. ಇದರ ಬೆನ್ನಲ್ಲೇ ಈಗ ಸ್ಯಾಂಡಲ್​ವುಡ್​ನಲ್ಲೂ ಕೂಡ ಜಸ್ಟಿಸ್​ ಹೇಮಾ ರೀತಿಯ ಕಮಿಟಿ ರಚಿಸಿ ಎಂದು ನಟ ಕಿಚ್ಚ ಸುದೀಪ್​, ನಟಿ ರಮ್ಯಾ ಸೇರಿದಂತೆ ಖ್ಯಾತನಾಮರು ಸಿಎಂಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ನಟ ಕಿಚ್ಚ ಸುದೀಪ್​, ರಮ್ಯಾ ಸೇರಿದಂತೆ 153 ಮಂದಿ ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಸ್ಯಾಂಡಲ್‌ವುಡ್‌ ನಲ್ಲಿ ಮೀ ಟೂ ಅಭಿಯಾನವಾದಾಗ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳೆಯರ ಸಮಸ್ಯೆಗಳಿಗಾಗಿ ಈ ಹಿಂದೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ರಚಿಸಲಾಗಿತ್ತು. 2017ರಲ್ಲಿ ಇದನ್ನು ಹುಟ್ಟುಹಾಕಲಾಯ್ತು. ಇದೀಗ ಮತ್ತೆ ಈ ಕಮಿಟಿ ಲೈಂಗಿಕ ಕಿರುಕುಳದ ವಿರುದ್ಧ ನಿಂತಿದೆ. ಇದೀಗ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ FIRE ಒತ್ತಾಯಿಸಿದೆ. ಜೊತೆಗೆ ಮಹಿಳೆಯರು ಕನ್ನಡ ಚಿತ್ರರಂಗದಲ್ಲಿ ಆರೋಗ್ಯಕರವಾಗಿ ಹಾಗೂ ಸಮಾನವಾಗಿ ಕೆಲಸ ಮಾಡುವಂತೆ ನಿಯಮಗಳನ್ನು ತರುವಂತೆ ಒತ್ತಾಯಿಸಿದೆ.

ಇದನ್ನೂ ಓದಿ: ರಾಗಾ​ ಭೇಟಿಯಾದ ಭಜರಂಗ್​, ವಿನೇಶ್​; ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಣಕ್ಕೆ

ಲಿಂಗ ನ್ಯಾಯವನ್ನು ಪ್ರತಿಪಾದಿಸುವ ಕನ್ನಡ ಚಲನಚಿತ್ರೋದ್ಯಮದ ಮತ್ತು ವಿವಿಧ ಕ್ಷೇತ್ರಗಳ 153 ವ್ಯಕ್ತಿಗಳು ಈ ಅರ್ಜಿಗೆ ಸಹಿ ಹಾಕಿದ್ದಾರೆ.   FIRE ಅಧ್ಯಕ್ಷೆ ನಿರ್ದೇಶಕಿ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟಿಯರಾದ ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧಾ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ಸಂಗೀತಾ ಭಟ್ , ನೀತು ಶೆಟ್ಟಿ, ಮಾನ್ವಿತಾ, ಶಾನ್ವಿ ಶ್ರೀವಾಸ್ತವ್, ನಟ ಸುದೀಪ್‌, ವಿನಯ್ ರಾಜ್‌ಕುಮಾರ್, ಕಿಶೋರ್, ದಿಗಂತ್, ನಿರ್ದೇಶಕ ಪವನ್ ಒಡೆಯರ್‌ ಸೇರಿದಂತೆ ಕಿರುತೆರೆ ನಟ ನಟಿಯರು ಸೇರೊ ಒಟ್ಟು  153 ಮಂದಿ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ವರದಿಯನ್ನು 3 ತಿಂಗಳ ಒಳಗೆ ಪೂರ್ಣಗೊಳಿಸಬೇಕು ಮತ್ತು ವರದಿಯ ವಿವರನ್ನು ಶೀಘ್ರವೇ ಸಾರ್ವಜನಿಕಗೊಳಿಸಬೇಕು ಎಂದು ಫೈರ್​ ಸಂಸ್ಥೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಮಲಯಾಳಂ ಚಿತ್ರರಂಗದ ರೀತಿಯೇ ಕನ್ನಡ ಚಿತ್ರರಂಗದಲ್ಲೂ ಒಂದು ವೇಳೆ ತನಿಖೆ ನಡೆದು ವರದಿ ಪ್ರಕಟವಾದರೆ ಒಂದಷ್ಟು ಮಂದಿಯ ಹೆಸರುಗಳು ಹೊರಬರುವ ಸಾಧ್ಯತೆ ಇದೆ.

2018ರಲ್ಲಿ ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತಾದ್ಯಾಂತ ಚಿತ್ರ ರಂಗದಲ್ಲಿ MeToo ಅಭಿಯಾನ ದೊಡ್ಡ ಮಟ್ಟದಲ್ಲಿ ಸುದ್ದಿಯಾಯ್ತು. ಬಾಲಿವುಡ್ ನಲ್ಲಿ ನಟಿ ತನುಶ್ರೀ ದತ್ತ ಮಾಡಿದ ಆರೋಪ ಅಂದು ಅಭಿಯಾನಕ್ಕೆ ನಾಂದಿ ಹಾಡಿತು. ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು. ಕನ್ನಡದಲ್ಲಿ ಆಗ ಶ್ರುತಿ ಹರಿಹರನ್ ಸೇರಿ ಅನೇಕ ನಟಿಯರು ಮಿ ಟೂ ಬಗ್ಗೆ ದನಿ ಎತ್ತಿದರು.

Share This Article

ಸುಖವಾದ ನಿದ್ದೆ ಬೇಕೆಂದರೆ ಯೋಗದ ಮೊರೆಹೋಗಿ

ಪ್ರ:ಸರಿಯಾಗಿ ನಿದ್ರೆ ಬರುವುದಿಲ್ಲ. ರಾತ್ರಿ 2-3 ತಾಸು ನಿದ್ರೆ ಬಂದರೆ ಹೆಚ್ಚು. ಸುಖನಿದ್ರೆಗಾಗಿ ಯಾವ ಯೋಗ…

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…