ಬೆಂಗಳೂರು: ಮಂಗಳವಾರ ಬೆಳಗಿನ ಜಾವ ನಮ್ಮ ಮೆಟ್ರೋ ರೀ ರೈಲು ಹಳಿ ತಪ್ಪಿದ ಪರಿಣಾಮ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಸಂಭವಿಸಿದೆ.
ಈ ಕುರಿತು ಬಿಎಂಆರ್‌ಸಿಎಲ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ತಿಳಿಸಿದೆ. ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಹಳಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದು, ಯಶವಂತಪುರದಿಂದ ಮಂತ್ರಿ ಮಾಲ್ವರೆಗೆ ರೈಲುಗಳು ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ.
ಇದನ್ನೂ ಓದಿ: ಸನಾತನ ಧರ್ಮ ಹೊರತುಪಡಿಸಿದರೆ ಉಳಿದೆಲ್ಲವೂ…: ಯೋಗಿ ಆದಿತ್ಯನಾಥ್
ರೀ ರೈಲ್ ವಾಹನವನ್ನು ಹಳಿಗೆ ತರಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ರೀ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ಉನ್ನತ ಮೂಲಗಳು ತಿಳಿಸಿವೆ.
ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ.