More

    ಆ.16ರಿಂದ ಮೆಟ್ರೋ ರೈಲು ಸಂಚಾರ?

    ಬೆಂಗಳೂರು: ಮಹಾಮಾರಿ ಕರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶವ್ಯಾಪಿ ಲಾಕ್​ಡೌನ್ ಜಾರಿಯಾಗಿತ್ತು. ಪರಿಣಾಮ ನಾಲ್ಕೂವರೆ ತಿಂಗಳಿನಿಂದ ಮೆಟ್ರೋ ರೈಲು ಸೇವೆ ಸ್ಥಗಿತಗೊಂಡಿದ್ದು, ಇದೀಗ ಆ.16ಕ್ಕೆ ಆರಂಭವಾಗುವ ಸಾಧ್ಯತೆಗಳಿವೆ.

    ಹಂತಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಿ ವಿಮಾನ, ರೈಲು, ಬಸ್​ ಸೇರಿ ಇನ್ನಿತರ ಸಾರಿಗೆ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಮೆಟ್ರೋ ರೈಲು ಸೇವೆ ಆರಂಭಕ್ಕೆ ಅನುಮತಿ ಸಿಗಬೇಕಿದೆ.

    ಇದನ್ನೂ ಓದಿರಿ ಸಿಎಂ ಯಡಿಯೂರಪ್ಪಗೆ ವರ್ಕ್​ ಫ್ರಮ್ ಹಾಸ್ಪಿಟಲ್

    ಲಾಕ್​ಡೌನ್​ನಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತಹಂತವಾಗಿ ತೆಗೆಯಲಾಗುತ್ತಿದೆ. ಮೆಟ್ರೋ ರೈಲು, ಚಿತ್ರಮಂದಿರಗಳು ಸೇರಿ ಇನ್ನಿತರ ಉದ್ಯಮಗಳ ಕಾರ್ಯಚಟುವಟಿಕೆಗೆ ಅನುಮತಿ ನೀಡಿಲ್ಲ. 15ರಂದು ಲಾಕ್​ಡೌನ್​ ತೆರವಿನ ಕುರಿತ ಮಾರ್ಗಸೂಚಿ ಬಿಡುಗಡೆ ಸಾಧ್ಯತೆಗಳಿವೆ.

    ಮೆಟ್ರೋ ರೈಲು ಸೇವೆ ಆರಂಭಿಸಲು ಅವಕಾಶ ಸಿಗುವ ಸಾಧ್ಯತೆ ಇರುವುದರಿಂದ ಬಿಎಂಆರ್​ಸಿಎಲ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲಸಕ್ಕೆ ಬರಲು ತಯಾರಿರುವಂತೆ ಸಿಬ್ಬಂದಿಗೆ ಈಗಾಗಲೇ ಸೂಚಿಸಿದೆ. ಪ್ರಯಾಣಿಕರು ಅನುಸರಿಸಬೇಕಾದ ನಿಯಮಗಳ ಪಟ್ಟಿಯನ್ನೂ ಸಿದ್ಧಪಡಿಸಿದೆ.

    ಅಯೋಧ್ಯೆಗೆ ಸೇರಬೇಕಿದ್ದ ಶ್ರೀರಾಮ, ಸೀತೆ, ಲಕ್ಷ್ಮಣರ ಪಂಚಲೋಹದ ವಿಗ್ರಹಗಳು ಬೆಳ್ತಂಗಡಿಯ ಕಣಿಯೂರಿನಲ್ಲಿ ಪ್ರತಿಷ್ಠಾಪನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts