25.1 C
Bangalore
Friday, December 6, 2019

ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮರುಸ್ಥಾಪನೆಗೆ ಓಮರ್​ ಅಬ್ದುಲ್ಲಾ, ಮೆಹಬೂಬಾ ಅವರನ್ನು ಸಂಪರ್ಕಿಸಿದ ಗೃಹ ಇಲಾಖೆ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರದಲ್ಲಿ ಕಾಶ್ಮೀರ ಕಣಿವೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ಕಣಿವೆಯಲ್ಲಿ ಶಾಂತಿ ಮರುಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಕೋರಿ ಗೃಹಬಂಧನದಲ್ಲಿರುವ ಮಾಜಿ ಸಿಎಂಗಳಾದ ಓಮರ್​ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಕೇಂದ್ರ ಗೃಹ ಸಚಿವಾಲಯ ಸಂಪರ್ಕಿಸಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಗೃಹ ಸಚಿವಾಲಯದ ಪರವಾಗಿ ಓಮರ್​ ಮತ್ತು ಮೆಹಬೂಬಾ ಅವರನ್ನು ಬೇಹುಗಾರಿಕಾ ಪಡೆ ಅಧಿಕಾರಿಗಳು ಸಂಪರ್ಕಿಸಿದ್ದಾರೆ. ಬಿಡುಗಡೆ ಬಳಿಕ ರಾಜಕೀಯ ಸಭೆಗಳನ್ನು ನಡೆಸುವುದಿಲ್ಲ… ಕಾಶ್ಮೀರದಲ್ಲಿನ ಹೊಸ ರಾಜಕೀಯ ಬೆಳವಣಿಗೆ ಕುರಿತು ಏನೊಂದು ಪ್ರತಿಕ್ರಿಯಿಸುವುದಿಲ್ಲ ಎಂಬ ಷರತ್ತುಗಳಿಗೆ ಒಪ್ಪಿಕೊಂಡರೆ ತಮ್ಮನ್ನು ಗೃಹ ಬಂಧನ ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿದೆ ಎನ್ನಲಾಗುತ್ತಿದೆ.

ಈ ಸುದ್ದಿಗಳನ್ನು ಅಲ್ಲಗಳೆದಿರುವ ನ್ಯಾಷನಲ್​ ಕಾನ್ಫರೆನ್ಸ್​ ನಾಯಕ ಓಮರ್​ ಅಬ್ದುಲ್ಲಾ, ಈ ವರದಿಗಳು ನಿರಾಧವಾದ, ಸುಳ್ಳು ಸುದ್ದಿಗಳು ಎಂದು ಹೇಳಿದ್ದಾರೆ. ಆದರೆ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಮೂಲಗಳು ಮಾತ್ರ ಕೆಲ ಸರ್ಕಾರಿ ಅಧಿಕಾರಿಗಳು ಗೃಹಬಂಧನದಲ್ಲಿರುವ ಉಭಯ ನಾಯಕರನ್ನು ಭೇಟಿಯಾಗಿದ್ದರು. ಮಾತುಕತೆ ನಡೆಸಿದ್ದರು ಎಂದು ಹೇಳಿವೆ.

ಕಣಿವೆಯಲ್ಲಿ ಶಾಂತಿ ಮರುಸ್ಥಾಪನೆಗೆ ಸಹಕರಿಸುವಂತೆ ಅವರಿಬ್ಬರ ಬಳಿ ಮನವಿ ಮಾಡಿಕೊಂಡರು. ಆದರೆ 370 ವಿಧಿ ರದ್ದುಗೊಳಿಸುವ ಸಂಸತ್​ನ ನಿರ್ಧಾರವನ್ನು ವಿರೋಧಿಸುವ ವಿಷಯವಾಗಿ ತಮ್ಮ ನಿಲುವನ್ನು ಬದಲಿಸಕೊಳ್ಳುವುದಿಲ್ಲ ಎಂದು ಉಭಯ ನಾಯಕರು ಸ್ಪಷ್ಟಪಡಿಸಿದರು ಎಂದು ತಿಳಿಸಿವೆ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ವಿಶೇಷ ಅಧಿಕಾರ ನೀಡುತ್ತಿದ್ದ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ರದ್ದುಗೊಳಿಸಿ ಆ.5ರಂದು ಸುಗ್ರೀವಾಜ್ಱಎ ಹೊರಡಿಸಿತ್ತು. ಬಳಿಕ ಉಭಯ ಸದನಗಳಿಂದಲೂ ಅನುಮೋದನೆ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕಣಿವೆಯಲ್ಲಿ ಅಶಾಂತಿಯನ್ನುಂಟು ಮಾಡಬಹುದು ಎಂಬ ಕಾರಣಕ್ಕಾಗಿ ಓಮರ್​ ಅಬ್ದುಲ್ಲಾ, ಮಹೆಬೂಬಾ ಮುಫ್ತಿ ಸೇರಿ ಹಲವು ಮಾಜಿ ಸಿಎಂಗಳನ್ನು ಗೃಹ ಬಂಧನದಲ್ಲಿರಿಸಿತ್ತು.

ಓಮರ್​, ಮುಫ್ತಿ ನಂಬಿಕೆ ಕಳೆದುಕೊಂಡಿದ್ದಾರೆ
ಜಮ್ಮು ಮತ್ತು ಕಾಶ್ಮಿರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಂತರದಲ್ಲಿ ಕಾಶ್ಮೀರದ ಜನತೆ ಭಾರಿ ಸಿಟ್ಟಿಗೆದ್ದಿದ್ದಾರೆ. ರಾಜಕೀಯ ಮುಖ್ಯವಾಹಿನಿಯ ನಾಯಕರ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಹಾಗಾಗಿ ಓಮರ್​ ಹೇಳಿದರೂ ಅಷ್ಟೇ… ಮೆಹಬೂಬಾ ಮುಫ್ತಿ ಹೇಳಿದರೂ ಅಷ್ಟೆ… ಅವರು ಯಾರ ಮಾತುಗಳನ್ನು ಕೇಳಲು ಜನರು ಸಿದ್ಧವಿಲ್ಲ. ಶಾಂತವಾಗಿರುವಂತೆ ಈ ನಾಯಕರು ಹೇಳಿದರೂ ಅವರು ಶಾಂತವಾಗಿರುವ ಸಾಧ್ಯತೆ ತುಂಬಾ ಕಡಿಮೆ ಎಂದು ರಾಜಕೀಯ ವಿಶ್ಲೇಷಕ ಮಾಜಿದ್​ ಹೈದರಿ ಹೇಳಿದ್ದಾರೆ.

ಈ ಇಬ್ಬರು ನಾಯಕರು ಮುಖ್ಯಮಂತ್ರಿಯಾಗುವ ನಿಟ್ಟಿನಲ್ಲಿ ಒಂದಲ್ಲ ಒಂದು ಹಂತದಲ್ಲಿ ಬಿಜೆಪಿಯ ಬೆಂಬಲ ಪಡೆದವರೇ ಆಗಿದ್ದಾರೆ. ಹಾಗಾಗಿ ಇವರಬ್ಬರೂ ಜನತೆಯ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್​)

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...