More

    ಆರ್‌ಸಿಬಿ ತಂಡದ ಮುಖ್ಯ ಕೋಚ್ ಆಗಿ ಮೈಕ್ ಹೆಸ್ಸನ್

    ಬೆಂಗಳೂರು: ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಮೈಕ್ ಹೆಸ್ಸನ್, 14ನೇ ಐಪಿಎಲ್ ಭಾಗ-2ರಲ್ಲಿ ಆರ್‌ಸಿಬಿ ತಂಡದ ಮುಖ್ಯಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ವೈಯಕ್ತಿಕ ಕಾರಣದಿಂದ ಸೈಮನ್ ಕಾಟಿಚ್ ಹಿಂದೆ ಸರಿದ ಹಿನ್ನೆಲೆಯಲ್ಲಿ ತಂಡದ ಕ್ರಿಕೆಟ್ ವ್ಯವಹಾರಗಳ ನಿರ್ದೇಶಕರಾಗಿದ್ದ ಮೈಕ್ ಹೆಸ್ಸನ್ ಹೆಚ್ಚುವರಿ ಜವಾಬ್ದಾರಿ ಹೊರಲಿದ್ದಾರೆ. ಆಸ್ಟ್ರೇಲಿಯಾದ ಆಡಂ ಜಂಪಾ ಬದಲಿಗೆ ಶ್ರೀಲಂಕಾದ ಲೆಗ್ ಸ್ಪಿನ್ನರ್ ವನಿಂದು ಹಸರಂಗ, ನ್ಯೂಜಿಲೆಂಡ್‌ನ ಫಿನ್ ಅಲೆನ್ ಬದಲಿಗೆ ಆಸ್ಟ್ರೇಲಿಯಾ ಮೂಲದ ಸಿಂಗಾಪುರದ ಆಟಗಾರ ಟಿಮ್ ಡೇವಿಡ್ ಹಾಗೂ ಆಸ್ಟ್ರೇಲಿಯಾದ ಡೆನಿಯಲ್ ಸ್ಯಾಮ್ಸ್ ಬದಲಿಗೆ ಶ್ರೀಲಂಕಾದ ದುಶ್ಮಾಂತ ಚಮೀರಾ ತಂಡ ಕೂಡಿಕೊಳ್ಳಲಿದ್ದಾರೆ. ಟಿಮ್ ಡೇವಿಡ್ ಬಿಗ್ ಬಾಷ್‌ನಲ್ಲಿ ಉತ್ತಮ ನಿರ್ವಹಣೆ ಮೂಲಕ ಗಮನಸೆಳೆದಿದ್ದರು.

    ಇದನ್ನೂ ಓದಿ: ಯುಎಸ್ ಓಪನ್‌ನಿಂದ ಹಿಂದೆ ಸರಿದ ಸ್ಟಾರ್ ಆಟಗಾರ ನಡಾಲ್

    * ಭಾರತ ವಿರುದ್ಧ ಮಿಂಚಿದ್ದ ಹಸರಂಗ
    ಆಡಂ ಜಂಪಾ ಬದಲಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಲೆಗ್ ಸ್ಪಿನ್ನರ್ ವನಿಂದು ಹಸರಂಗ ಕಳೆದ ತಿಂಗಳು ಶ್ರೀಲಂಕಾದಲ್ಲಿ ನಡೆದ ಭಾರತ ವಿರುದ್ಧದ ನಿಗದಿತ ಓವರ್‌ಗಳ ಸರಣಿಯಲ್ಲಿ ಉತ್ತಮ ನಿರ್ವಹಣೆ ತೋರಿದ್ದರು. ಮೂರು ಟಿ20 ಪಂದ್ಯಗಳಿಂದ 7 ವಿಕೆಟ್ ಕಬಳಿಸಿದ್ದರು. ಆರ್‌ಸಿಬಿಗೆ ಹೆಚ್ಚುವರಿ ಲೆಗ್ ಸ್ಪಿನ್ನರ್ ಅವಶ್ಯತೆ ಇದ್ದ ಹಿನ್ನೆಲೆಯಲ್ಲಿ ಹಸರಂಗಗೆ ಮಣೆಹಾಕಿದೆ.

    ಇದನ್ನೂ ಓದಿ: ಪ್ರೊ ಕಬಡ್ಡಿ ಲೀಗ್: ಸ್ಟಾರ್ ಆಟಗಾರರಿಗೆ ಗೇಟ್ ಪಾಸ್ ಕೊಟ್ಟ ಫ್ರಾಂಚೈಸಿಗಳು

    * ಆಗಸ್ಟ್ 29ಕ್ಕೆ ಯುಎಇಗೆ ಪ್ರಯಾಣ
    ಆರ್‌ಸಿಬಿ ತಂಡದಲ್ಲಿರುವ ಭಾರತದ ಆಟಗಾರರು, ಸಹಾಯಕ ಸಿಬ್ಬಂದಿ ಹಾಗೂ ತಂಡದ ಆಡಳಿತ ಮಂಡಳಿ ಸದಸ್ಯರು ಶನಿವಾರ ಬೆಂಗಳೂರಿಆಗೆ ಆಗಮಿಸಿದ್ದು, ಮುಂದಿನ 7 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. ಈ ಅವಧಿಯಲ್ಲಿ ಮೂರು ಬಾರಿ ಕೋವಿಡ್-19 ಪರೀಕ್ಷೆಗೆ ಒಳಪಡಲಿದ್ದಾರೆ. ಆಗಸ್ಟ್ 29 ರಂದು ಬೆಂಗಳೂರಿನಿಂದ ಚಾರ್ಟಡ್ ವಿಮಾನದ ಮೂಲಕ ಆರ್‌ಸಿಬಿ ತಂಡ ಯುಎಇಗೆ ಪ್ರಯಾಣ ಬೆಳೆಸಲಿದೆ. ಯುಎಇಯಲ್ಲೂ 6 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಲಿದೆ. ಪರಿಸ್ಥಿತಿಗೆ ತಕ್ಕಂತೆ ತಂಡದಲ್ಲಿ ಕೆಲವೊಂದು ಬದಲಾವಣೆಯಾಗಿದೆ. ಮೂವರು ಬದಲಿ ಆಟಗಾರರು ಉತ್ತಮ ಆಯ್ಕೆಯೇ ಆಗಿದ್ದು, ಮೊದಲ ಹಂತದಲ್ಲಿದ್ದ ಉತ್ತಮ ನಿರ್ವಹಣೆಯನ್ನೇ ಮುಂದುವರಿಸುವ ಸವಾಲು ನಮ್ಮ ಮುಂದಿದೆ ಎಂದು ಮುಖ್ಯಕೋಚ್ ಮೈಕ್ ಹೆಸ್ಸನ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts