

ಪಡುಬಿದ್ರಿ: ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ ಮಿಲಿಂದ್ ನಾರ್ವೇಕರ್ ದಂಪತಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶುಕ್ರವಾರ ಆಗಮಿಸಿ ಮಾರಿಯಮ್ಮನ ದರುಶನ ಪಡೆದು, ಕಾಮಗಾರಿಯ ವೀಕ್ಷಣೆ ಮಾಡಿದರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಜೀರ್ಣೋದ್ಧಾರ ನಡೆದು ಬಂದ ಹಾದಿ, ಕ್ಷೇತ್ರದಲ್ಲಿ ಸಾನ್ನಿಧ್ಯ ವೃದ್ಧಿಗಾಗಿ ನಡೆದ ಧಾರ್ಮಿಕ ವಿಧಿಗಳು ಹಾಗೂ ಇನ್ನಿತರ ವಿಚಾರಗಳ ಸಂಕ್ಷಿಪ್ತವಾಗಿ ವಿವರಿಸಿದರು. ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಅನುಗ್ರಹ ಪ್ರಸಾದ ನೀಡಿದರು. ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಚಂದ್ರಘಂಟಾ ತಂಡದ ಸಂಚಾಲಕ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.