More

    ಉಗ್ರರ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ನೀಡುವಂತೆ ಬಿಜೆಪಿ ಕಾರ್ಯಕರ್ತರ ಒತ್ತಾಯ

    ಕೊಪ್ಪಳ: ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಉಗ್ರರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ಕಾಂಗ್ರೆಸ್ ಅಧಿಕಾರಕ್ಕಾಗಿ ಉಗ್ರರನ್ನು ಪೋಷಿಸುತ್ತಿದೆ. ಬೆಲೆ ಏರಿಕೆ, ಮನಬಂದಂತೆ ತೆರಿಗೆ ವಿಧಿಸಿ ರೈತರನ್ನು ಆತ್ಮಹತ್ಯೆಗೆ ಪ್ರಚೋದಿಸುತ್ತಿದೆ. ರಾಜ್ಯದ ಉನ್ನತ ಅಧಿಕಾರಿಗಳನ್ನು ಸೇವಕರಂತೆ ಬಳಸುತ್ತಿದೆ. ಅಪರಾಧ ಪ್ರಮಾಣ ಹೆಚ್ಚುತ್ತಿದೆ. ಕಲುಷಿತ ನೀರು ಸೇವಿಸಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

    ಗ್ಯಾರಂಟಿ ಹೆಸರಿನಲ್ಲಿ ಜನರ ಅಭಿವೃದ್ಧಿ ಯೋಜನೆಗಳಿಗೆ ತಡೆ ನೀಡಲಾಗಿದೆ. ಕಲ್ಯಾಣ ಕಾರ್ಯಕ್ಕೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿ ಜನವಿರೋಧಿ ನಡೆ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವ ವಿರೋಧಿ ನೀತಿ ಕೈ ಬಿಡಬೇಕು. ಸರ್ಕಾರಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಗರಾವ್ ಕುಲಕರ್ಣಿ, ಪ್ರಮುಖರಾದ ರಮೇಶ ಬಡಿಗೇರ, ಆರ್.ಬಿ.ಪಾನಘಂಟಿ, ವಿ.ಎಂ.ಭೂಸನೂರಮಠ, ರಾಜು ಬಾಕಳೆ, ಚಂದ್ರಶೇಖರ್ ಕವಲೂರು, ಪ್ರದೀಪ್ ಹಿಟ್ನಾಳ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts