18.1 C
Bangalore
Saturday, December 7, 2019

ಭಾರತೀಯ ಸೇನಾಪಡೆಯಲ್ಲಿ ನಿಧಾನವಾಗಿ ಹಬ್ಬಿರುವ ಅಸಮಾಧಾನದ ಹೊಗೆ ದಟ್ಟವಾಗುವ ಸಾಧ್ಯತೆ… ಏಕೆ ಹೀಗೆ?

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ನವದೆಹಲಿ: ಭಾರತೀಯ ಸೇನಾ ಪಡೆಯ ಮೂರು ವಿಭಾಗಗಳಲ್ಲಿ ಸಣ್ಣಮಟ್ಟದಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಮುಂದೆ ಇದು ದಟ್ಟವಾಗುವ ಲಕ್ಷಣಗಳೂ ಕಾಣಿಸುತ್ತಿವೆ. ಅಷ್ಟಕ್ಕೂ ಈ ಅಸಮಾಧಾನಕ್ಕೆ ಕಾರಣ ಏನು…?

ಸೇನೆಯಲ್ಲಿ ಸೇವೆ ಸಲ್ಲಿಸುವಾಗ ಅಂಗವೈಕಲ್ಯಕ್ಕೆ ಒಳಗಾದ ಯೋಧರಿಗೆ ಅಂಗವೈಕಲ್ಯ ಪಿಂಚಣಿಯನ್ನೂ ಹಾಗೂ ಸೇವಾ ನಿವೃತ್ತಿ ಹೊಂದಿದ ಯೋಧರಿಗೆ ನಿವೃತ್ತಿ ವೇತನವನ್ನೂ ಕೊಡಲಾಗುತ್ತದೆ. ಯೋಧರಿಗೆ ಕೊಡುವ ಅಂಗವೈಕಲ್ಯ ಪಿಂಚಣಿ ಮತ್ತು ನಿವೃತ್ತಿ ವೇತನಕ್ಕೆ ತೆರಿಗೆ ವಿಧಿಸಲು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ನಿರ್ಧರಿಸಿದೆ.

ಈ ಸಂಬಂಧ ಸೋಮವಾರ ಸುತ್ತೋಲೆ ಹೊರಡಿಸಿರುವ ಸಿಬಿಟಿಡಿ, ಸೇವೆಯಲ್ಲಿದ್ದಾಗ ಅಂಗವೈಕಲ್ಯಕ್ಕೆ ಒಳಗಾಗಿ, ಅದೇ ಕಾರಣಕ್ಕಾಗಿ ಸೇವಾ ನಿವೃತ್ತಿ ನೀಡಲಾಗಿದ್ದರೆ, ಅಂಥ ಯೋಧರಿಗೆ ಕೊಡಲಾಗುವ ಅಂಗವೈಕಲ್ಯ ಪಿಂಚಣಿಗೆ ಮಾತ್ರ ಈಗಿರುವಂತೆ ತೆರಿಗೆ ವಿನಾಯಿತಿ ಮುಂದುವರಿಯುತ್ತದೆ. ಇದನ್ನು ಹೊರತುಪಡಿಸಿ, ಅಂಗವೈಕಲ್ಯ ಪಿಂಚಣಿ ಪಡೆಯುತ್ತಿರುವ ಬೇರೆಲ್ಲ ಯೋಧರು ಹಾಗೂ ಸೇವಾ ನಿವೃತ್ತಿ ಹೊಂದಿದ ಎಲ್ಲ ಯೋಧರಿಗೂ ಕೊಡಲಾಗುವ ನಿವೃತ್ತಿ ವೇತನಕ್ಕೆ ತೆರಿಗೆ ವಿಧಿಸಲಾಗುತ್ತದೆ ಎಂದು ಹೇಳಿದೆ. ಆದರೆ, ಈ ನಿಯಮ ಎಂದಿನಿಂದ ಜಾರಿಗೆ ಬರುತ್ತದೆ ಎಂಬುದನ್ನು ಮಾತ್ರ ಸುತ್ತೋಲೆ ಸ್ಪಷ್ಟಪಡಿಸಿಲ್ಲ.

ಸೇವೆಯಲ್ಲಿ ಅಂಗವೈಕಲ್ಯಕ್ಕೆ ಒಳಗಾದ ಯೋಧರಿಗೆ ಒಂದು ಕೈಯಲ್ಲಿ ಸೌಲಭ್ಯವನ್ನು ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವಂಥ ನೀತಿ ಇದಾಗಿದೆ. ಶ್ರೇಣಿಗಳನ್ನು ಆಧರಿಸಿ ನೀಡಲಾಗುವ ಪಿಂಚಣಿಗೆ ಇದುವರೆಗೂ ತೆರಿಗೆ ವಿನಾಯಿತಿ ನೀಡಲಾಗುತ್ತಿತ್ತು. ಆದರೆ ಈಗ ಈ ಸೌಲಭ್ಯವನ್ನು ಹಿಂಪಡೆದಂತಾಗುವುದು ಸೇನಾಪಡೆಯ ಮೂರು ವಿಭಾಗಗಳ ಯೋಧರ ಅಸಮಾಧಾನಕ್ಕೆ ಕಾರಣವಾಗಿದೆ.

ತಮಗೆ ಬಂದ ಕೆಲವು ಮನವಿಗಳನ್ನು ಆಧರಿಸಿ, ನಿಜಾರ್ಥವನ್ನು ಆಧರಿಸಿ ಹಾಲಿ ಇರುವ ನಿಯಮಗಳನ್ನು ವಿಶ್ಲೇಷಿಸಿರುವುದಾಗಿ ಹಣಕಾಸು ಇಲಾಖೆ ಮತ್ತು ಸಿಬಿಡಿಟಿ ಹೇಳುತ್ತಿವೆ. ಆದರೆ, ಇದು ಕಿಡಿಗೇಡಿತನದ ಕ್ರಮ ಎಂದು ನಿವೃತ್ತ ಯೋಧರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವು ಸೇನಾಧಿಕಾರಿಗಳು ಮತ್ತು ಯೋಧರು ಅಂಗವೈಕಲ್ಯ ಪಿಂಚಣಿ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸುಳ್ಳಲ್ಲ. ಕೆಲವು ಹಿರಿಯ ಅಧಿಕಾರಿಗಳು ನಿವೃತ್ತಿಯಾಗುವ ಕೆಲದಿನಗಳ ಮೊದಲು ನಕಲಿ ಅಂಗವೈಕಲ್ಯ ಪ್ರಮಾಣಪತ್ರ ಪಡೆದು, ಅಂಗವೈಕಲ್ಯ ಪಿಂಚಣಿ ಪಡೆಯುವ ಮೂಲಕ ಹೆಚ್ಚಿನ ಪಿಂಚಣಿ ಪಡೆಯುತ್ತಿದ್ದಾರೆ. ಕೇಂದ್ರದ 7ನೇ ವೇತನ ಆಯೋಗ ಕೂಡ ಅಂಗವೈಕಲ್ಯ ಪಿಂಚಣಿ ಪಡೆಯುವ ಪ್ರಮಾಣದಲ್ಲಿ, ವಿಶೇಷವಾಗಿ ಹಿರಿಯ ಶ್ರೇಣಿಗಳ ವರ್ಗದಲ್ಲಿ ದಿಢೀರ್​ ಹೆಚ್ಚಳವಾಗುತ್ತಿರುವ ಬಗ್ಗೆ ಆಕ್ಷೇಪವೆತ್ತಿತ್ತು. ಹಾಗೆಂದು ನಿಜವಾಗಿಯೂ ಈ ಪಿಂಚಣಿಗೆ ಅರ್ಹರಾಗಿರುವವರಿಗೆ ತೆರಿಗೆಯ ಬರೆ ಹಾಕುವುದು ಸರಿಯಲ್ಲ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...