More

    ಆಹಾರ ಪದಾರ್ಥಗಳ ಮೇಲಿನ ಜಿಎಸ್‌ಟಿ ಹಿಂಪಡೆಯುವಂತೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ

    ಹೊಸಪೇಟೆ: ಹಾಲು, ಮೊಸರು, ಮಜ್ಜಿಗೆ ಸೇರಿದಂತೆ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ಖಂಡಿಸಿ ತಕ್ಷಣವೇ ಜಿಎಸ್‌ಟಿಯನ್ನು ಹಿಂಪಡೆಯಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

    ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದುಡಿದು ತಿನ್ನುವ ಕಾರ್ಮಿಕರು ಮತ್ತು ಬಡವರ ಬದುಕಿನ ಮೇಲೆ ಮೇಲೆ ಗದಾ ಪ್ರಹಾರ ನಡೆಸುತ್ತಿದೆ. ಈಗಾಗಲೇ ಕೋವಿಡ್‌ನಿಂದ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಹಾರ ಪದಾರ್ಥಗಳು ಸೇರಿದಂತೆ ಬಹುತೇಕ ಉದ್ಯಮ ಮತ್ತು ಸೇವೆಗಳ ಮೇಲಿನ ಜಿಎಸ್‌ಟಿ ಹೆಚ್ಚಳದಿಂದ ಜನರ ಬದುಕು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದ್ದು, ಜನರು ತಿನ್ನುವ ಅನ್ನಕ್ಕೂ ಸರ್ಕಾರ ಕಲ್ಲು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಡವರಿಗೆ ಅನುಕೂಲವಾಗಲೆಂದು ಜಿಎಸ್‌ಟಿ ಜಾರಿಗೊಳಿಸಲಾಗುತ್ತಿದೆ ಎಂದು ಆರಂಭದಲ್ಲಿ ಕೇಂದ್ರ ಸರ್ಕಾರ ಹೇಳಿಕೊಂಡಿತ್ತು. ಆದರೆ, ಈಗಿನ ವಾಸ್ತವತೆ ಅದಕ್ಕೆ ತದ್ವಿರುದ್ಧವಾಗಿದೆ ಎಂದು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ಕೂಡಲೇ ಆಹಾರ ಪದಾರ್ಥಗಳ ಮೇಲೆ ಹೆಚ್ಚುವರಿಯಾಗಿ ವಿಧಿಸಿರುವ ಜಿಎಸ್‌ಟಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ಗುರುಬಸವರಾಜಗೆ ಸಲ್ಲಿಸಿ ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts