

ಮಂಗಳೂರು : ಅವಿಭಜಿತ ದ.ಕ. ಜಿಲ್ಲೆಯಲ್ಲಿ ಪ್ರತಿದಿನ 3 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಆದರೆ ಮಾರುಕಟ್ಟೆಯಲ್ಲಿ 5ಲಕ್ಷ ಲೀಟರ್ ಹಾಲು ಬೇಡಿಕೆ ಇರುವುದರಿಂದ, ಹೆಚ್ಚುವರಿ ಹಾಲನ್ನು ಬೇರೆ ಜಿಲ್ಲೆಯಿಂದ ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ದ.ಕ. ಸಹಕಾರಿ ಹಾಲು ಒಕ್ಕೂಟದವರು ಹೈನುಗಾರರನ್ನು ಉತ್ತೇಜಿಸಿ ಇನ್ನೂ ಹೆಚ್ಚು ಹಾಲು ಸಂಗ್ರಹವಾಗಲು ಪ್ರಯತ್ನಿಸಬೇಕೆಂದು
ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ.ಜಿಲ್ಲಾ ಸಹಕಾರ ಯೂನಿಯನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್,
ಹಾಗೂ ಸಹಕಾರ ಇಲಾಖೆ ವತಿಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧಿಕಾರಿಗಳಿಗೆ ನಡೆದ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ದ.ಕ. ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಮಾತನಾಡಿ ದ.ಕ. ಹಾಲು ಒಕ್ಕೂಟವು ಕರ್ನಾಟಕದಲ್ಲಿ ಮಾದರಿ ಹಾಲು ಒಕ್ಕೂಟವಾಗಿದೆ. ಸಿಬ್ಬಂದಿಗೆ ಸರಿಯಾದ ಮಾಹಿತಿ, ತರಬೇತಿ ನೀಡುವುದು ಒಕ್ಕೂಟದ ಬೆಳವಣಿಗೆಗೆ ಪೂರಕವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದ.ಕ.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಲು ಉತ್ಪಾದನೆ ಹೆಚ್ಚಾಗಲು ಪ್ರತಿ ಗ್ರಾಮದಲ್ಲೂ, ಹೈನುಗಾರರಿಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸಗಳು ಆಗಬೇಕು ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕ
ಎಚ್.ಎನ್ ರಮೇಶ್, ಯೂನಿಯನ್‌ನ ಉಪಾಧ್ಯಕ್ಷ ನೀಲಯ ಎಂ ಅಗರಿ, ನಿರ್ದೇಶಕರಾದ ಡಾ. ಎಸ್.ಆರ್. ಹರೀಶ್ ಆಚಾರ್ಯ, ಚಿತ್ತರಂಜನ್ ಬೋಳಾರ್, ಸುಧಾಕರ ಶೆಟ್ಟಿ, ಸಂಜೀವ ಪೂಜಾರಿ, ಸವಿತಾ ಎನ್ ಶೆಟ್ಟಿ, ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ವ್ಯವಸ್ಥಾಪಕ ರವಿರಾಜ್ ಉಡುಪ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ
ಎನ್.ಜೆ. ಗೋಪಾಲ್ ಮತ್ತು ಗಣನಾಥ ಶೆಟ್ಟಿ ಎಕ್ಕಾರು ಭಾಗವಹಿಸಿದ್ದರು. ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ್ ಕಾರ್ಯಕ್ರಮ ನಿರೂಪಿಸಿದರು.