20.4 C
Bengaluru
Sunday, January 19, 2020

ಸಿರಿಧಾನ್ಯಕ್ಕೆ ಬೇಕಿದೆ ಬೆಂಬಲ ಬೆಲೆ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ತುಮಕೂರು: ಸರ್ಕಾರದ ಮಾತು ಕೇಳಿ ಸಿರಿಧಾನ್ಯ ಬೆಳೆದ ರೈತರು ಕಂಗಾಲಾಗಿದ್ದಾರೆ. ಸರ್ಕಾರದ ಪ್ರೋತ್ಸಾಹಧನ ಭರವಸೆಯಿಂದ ಸಾಮೆ ಬೆಳೆದಿದ್ದ ಅನ್ನದಾತರೀಗ ಬೆಲೆ ಕುಸಿತದ ಬಿಸಿ ಅನುಭವಿಸುವಂತಾಗಿದೆ. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಸಿರಿಧಾನ್ಯಕ್ಕೆ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕೆಂಬ ಆಗ್ರಹ ಕೇಳಿಬರತೊಡಗಿದೆ.

ಜಿಲ್ಲೆಯ ಮಾರುಕಟ್ಟೆಗಳಲ್ಲಿ ಕಳೆದೊಂದು ತಿಂಗಳ ಹಿಂದೆ ಕ್ವಿಂಟಾಲ್ ಸಾಮೆಗೆ 2800 ರೂಪಾಯಿ ಇತ್ತು. ಆದರೆ ಬೆಲೆ ಏಕಾಏಕಿ 2300ಕ್ಕೆ ಕುಸಿದಿದೆ. ಮಾರುಕಟ್ಟೆಗೆ ಹೆಚ್ಚು ಬೆಳೆ ಬರಲಾರಂಭಿಸಿದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಬೆಲೆ ಕಡಿಮೆ ಮಾಡಿರುವುದು ರೈತರ ನೋವಿಗೆ ಕಾರಣವಾಗಿದೆ. ನಗರವಾಸಿಗಳ ಆರೋಗ್ಯ ದೃಷ್ಟಿಯಲ್ಲಿಟ್ಟುಕೊಂಡು ಸಿರಿಧಾನ್ಯ ಬೆಳೆಯಿರಿ ಎಂದು ಸರ್ಕಾರ
ರೈತರಿಗೆ ಮನವಿ ಮಾಡಿತ್ತು.

ಜಿಲ್ಲೆಯಲ್ಲಿ 6393 ಹೆಕ್ಟೇರ್ ಪ್ರದೇಶದಲ್ಲಿ ಸಾಮೆ ಬಿತ್ತನೆಯಾಗಿದ್ದು, ಈಚೆಗೆ ಉತ್ತಮ ಮಳೆಯ ಕಾರಣಕ್ಕೆ ಬಂಪರ್ ಬೆಳೆ ರೈತನ ಕೈಸೇರಿದೆ. ಆದರೆ, ಇದೇ ಸಂದರ್ಭದಲ್ಲಿ ಬೆಲೆ ಕಡಿಮೆಯಾಗಿರುವುದು ವ್ಯಾಪಾರಿಗಳಿಗಷ್ಟೇ ಲಾಭ ತಂದುಕೊಡಲಿದೆ. ರಾಜಸ್ಥಾನ ಬಿಟ್ಟರೆ ದೇಶದಲ್ಲಿ ಅತೀ ಹೆಚ್ಚು ಬರಗಾಲಕ್ಕೆ ತುತ್ತಾಗುವ ಕರ್ನಾಟಕದ ಬರಕ್ಕೆ ಪರ್ಯಾಯ ಸಿರಿಧಾನ್ಯವಾಗಿದ್ದು, ಸರ್ಕಾರಮಧ್ಯಪ್ರವೇಶಿಸಿ ಬೆಂಬಲ ಬೆಲೆ ಘೋಷಿಸಿದರಷ್ಟೇ ರೈತರು ಉಳಿಯಲಿದ್ದಾರೆ. ಸಾಮೆ ಸೇರಿ ವಿವಿಧ ಸಿರಿಧಾನ್ಯ ಬೆಳೆದಿರುವ 11227 ರೈತರು ‘ರೈತಸಿರಿ’ ಯೋಜನೆಯಲ್ಲಿ ಸರ್ಕಾರದಿಂದಹೆಕ್ಟೇರ್‌ಗೆ ನೀಡಲಾಗುವ 10 ಸಾವಿರ ರೂಪಾಯಿ ಪ್ರೋತ್ಸಾಹಧನಕ್ಕೆ ಕಾದಿರುವ ಸಂದರ್ಭದಲ್ಲಿ
ಬೆಲೆ ಕುಸಿತದ ಬರೆ ಎಳೆದಂತಾಗಿದೆ.

ಮಾರುಕಟ್ಟೆಯಲ್ಲಿ ಶೋಷಣೆ ತಪ್ಪಿಸಿ: ರೈತರಿಂದ ಕ್ವಿಂಟಾಲ್‌ಗೆ 2000 ರೂ. ಕೊಟ್ಟು ಕೊಂಡ ಸಾಮೆ, ಹಾರಕ, ಕೊರಲೆ ಸಿರಿಧಾನ್ಯಗಳು ಸ್ವಚ್ಛಗೊಂಡು ಮಾರುಕಟ್ಟೆಗೆ ಬಂದರೆ 10,000 ರೂ.ಗೆ ಮಾರಾಟವಾಗುತ್ತಿವೆ. 750ರೂ. ಕೊಟ್ಟು ಒಂದು ಕ್ವಿಂಟಾಲ್ ಸಾಮೆ ಅಕ್ಕಿ ಮಾಡಿಸಿದರೆ 50 ಕೆಜಿ ಅಕ್ಕಿ ಸಿಗುತ್ತದೆ. ಮಾರುಕಟ್ಟೆ ದರದಲ್ಲಿ ಕನಿಷ್ಠ 4000 ರೂ.ರೈತನಿಗೆ ನ್ಯಾಯವಾಗಿ ಸಿಗಬೇಕು. ಮಾರುಕಟ್ಟೆ ಅರಿವಿನ ಕೊರತೆ ಕಾರಣಕ್ಕೆ ಸಿಕ್ಕಷ್ಟೇ ದರಕ್ಕೆ ರೈತ ಮಾರುತ್ತಿದ್ದಾನೆ. ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಮಾರುಕಟ್ಟೆಯಲ್ಲಿ ರೈತರಿಗಾಗುತ್ತಿರುವ ಶೋಷಣೆ ತಪ್ಪಿಸುವ ಅವಶ್ಯಕತೆಯಿದೆ.

ಮಾರುಕಟ್ಟೆಯಲ್ಲಿ ರೈತರಿಗೆ ಮೋಸವಾಗುತ್ತಿದೆ, ಸಂಸ್ಕರಣಾ ಘಟಕದಲ್ಲಿ ಕ್ವಿಂಟಾಲ್ ಸಾಮೆ ಶುಚಿಗೊಳಿಸಿ, ಅಕ್ಕಿ ಮಾಡಲು 750 ರೂ. ಆಗುತ್ತಿದೆ. ಮಾರಾಟ ಕಷ್ಟವಾಗಿರುವ ಕಾರಣಕ್ಕೆ ರೈತರು ಅಗ್ಗದ ದರಕ್ಕೆ ಮಾರುವಂತಾಗಿದೆ. ಸರ್ಕಾರ ಸಿರಿಧಾನ್ಯಕ್ಕೆ ಬೆಂಬಲ ಬೆಲೆ ಘೋಷಿಸಬೇಕು.
ರಘು ಗೋಪಾಲನಹಳ್ಳಿ, ರೈತ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...