More

    ಉತ್ತಮ ಬೆಳೆ ಬೆಳೆದು ಹೆಚ್ಚಿನ ಆದಾಯ ಗಳಿಸಿ

    ಮದ್ದೂರು: ರೈತರು ಗುಣಮಟ್ಟದ ಬೆಳೆ ಬೆಳೆಯುವ ಮೂಲಕ ಉತ್ತಮ ಮೌಲ್ಯವರ್ಧನೆ ಉತ್ಪನ್ನಗಳನ್ನು ಉತ್ಪಾದಿಸಿ ಹೆಚ್ಚಿನ ಆದಾಯ ಗಳಿಸಬೇಕು ಎಂದು ಒಡಿಪಿ ಸಂಸ್ಥೆ ನಿರ್ದೇಶಕ ಅಲೆಕ್ಸ್ ಪ್ರಶಾಂತ್ ಸಲಹೆ ನೀಡಿದರು.

    ತಾಲೂಕಿನ ಸೋಮನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆ.ಕೊಡಿಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ರಾಗಿ ಮೌಲ್ಯವರ್ಧನೆ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಅಧಿಕ ಇಳುವರಿ ತೆಗೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.

    ರಾಗಿ ಅತ್ಯುತ್ತಮ ಪೌಷ್ಟಿಕಾಂಶ ಹೊಂದಿರುವ ಸಿರಿಧಾನ್ಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದನ್ನು ಉಪಯೋಗಿಸುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ರಾಗಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಸಂಸ್ಥೆಯ ಸಂಯೋಜಕ ರಮೇಶ್ ಮಾತನಾಡಿ, ಒಡಿಪಿ ಸಂಸ್ಥೆಯು ರೈತರ ಅಭಿವೃದ್ಧಿಗಾಗಿ ಹಲವಾರು ಕೃಷಿ ತರಬೇತಿ ನೀಡುತ್ತಿದೆ. ಬೆಳೆಗಳ ಅಧ್ಯಯನ ಪ್ರವಾಸದ ಜತೆ ಸಿರಿಧಾನ್ಯ ಉತ್ಪನ್ನಗಳ ಬೆಳೆಯುವ ಬಗ್ಗೆ ತರಬೇತಿ ನೀಡುತ್ತಿದೆ. ಮಾದರಿ ರೈತರಿಗೆ ಸಹಾಯಧನ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದು ಹೇಳಿದರು.

    ಇದೇ ವೇಳೆ ಸಿರಿಧಾನ್ಯ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು. ಆಯ್ಕೆಯಾದ ಮಾದರಿ ರೈತರಿಗೆ ಚೆಕ್ ವಿತರಿಸಲಾಯಿತು. ಸಂಯೋಜಕರಾದ ಜಯರಾಮು, ಜಾನ್, ರೈತ ಸಮಿತಿಯ ಅಧ್ಯಕ್ಷ ಹನುಮೇಗೌಡ, ಕಾರ್ಯಕರ್ತೆಯರಾದ ಭಾರತೀ, ಜಯಶೀಲಾ, ರೈತ ಮಹಿಳೆ ರತ್ನಮ್ಮ, ಕೆ. ಕೋಡಿಹಳ್ಳಿ ಗ್ರಾಮಸ್ಥರು ಮತ್ತು ರೈತರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts