ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಶಾಕ್​; ಸಂಸತ್​ ಸ್ಥಾನಕ್ಕೆ ಟಿಎಂಸಿಯ ಮಿಮಿ ಚಕ್ರವರ್ತಿ ರಾಜೀನಾಮೆ

MiMi Chakraborthy
Published on

ನವದೆಹಲಿ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಅಧಿಕಾರಕ್ಕೇರಬೆಂಕೆಂದು ಪಣ ತೊಟ್ಟಿರುವ ಇಂಡಿಯಾ ಒಕ್ಕೂಟದಲ್ಲಿ ಯಾಕೋ ಎಲ್ಲವೂ ಸರಿ ಇಲ್ಲವೆಂಬುದು ಗೋಷರವಾಗುತ್ತಿದೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ನ ಸಂಸದರೊಬ್ಬರು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಜಾದವ್‌ಪುರದ ಸಂಸದೆ ನಟಿ ಮಿಮಿ ಚಕ್ರವರ್ತಿ ತಮ್ಮ ರಾಜೀನಾಮೆ ಪತ್ರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾತನಾಡಿರುವ ಮಿಮಿ ಚಕ್ರವರ್ತಿ, ಅಭಿವೃದ್ಧಿಯ ವಿಚಾರದಲ್ಲಿ ನಾನು ಜಾದವ್​ಪುರವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಬೇಕು ಎಂದುಕೊಂಡಿದ್ದೆ. ಆದರೆ, ನಾನು ಈ ವಿಚಾರದಲ್ಲಿ ಸಾಕಷ್ಟು ಅಡೆತಡೆಗಳನ್ನು ಎದುರಿಸಿದೆ ಮತ್ತು ಸ್ಥಳೀಯ ನಾಯಕತ್ವವು ನನಗೆ ಹೆಚ್ಚು ಸಹಕರಿಸಲಿಲ್ಲ. ಚಲನಚಿತ್ರ ಹಿನ್ನಲೆಯಿಂದ ಬಂದವಳು ಈಕೆ ಹೆಚ್ಚು ಕೆಲಸ ಮಾಡುವುದಿಲ್ಲ ಎಂದು ಪದೇ ಪದೇ ನನ್ನನ್ನು ಕೆಣಕುತ್ತಿದ್ದರು. ಈ ವಿಚಾರವಾಗಿ ನಾನು ರಾಜೀನಾಮೆ ನೀಡಿದ್ಧೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ನಟಿ, ಟಿಎಂಸಿ ಸಂಸದೆ ನುಸ್ರತ್​ ಜಹಾನ್ ಸಹ ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಸಂದೇಶ್​ ಕಾಳಿಯಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಮಾತನಾಡದೆ ಮೌನ ವಹಿಸಿದ್ದಾರೆ. ಇತ್ತ ಮಿಮಿ ಚಕ್ರವರ್ತಿ ರಾಜೀನಾಮೆ ಟಿಎಂಸಿಗೆ ತಲೆನೋವಾಗಿ ಪರಿಣಮಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದು ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net