More

    ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ

    ಮದ್ದೂರು: ತಾಲೂಕಿನ ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಅಕ್ರಮ ಮರಳುಗಾರಿಕೆ ನಡೆಯದಂತೆ ಅಧಿಕಾರಿಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಸೂಚಿಸಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಹಮ್ಮಿಕೊಂಡಿದ್ದ ಗಣಿ ಸಂರಕ್ಷಣಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲ ಇಲಾಖೆಗಳ ಅಧಿಕಾರಿಗಳು ಒಂದು ತಂಡವಾಗಿ ರಚನೆಗೊಂಡು ಶಿಂಷಾ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಕ್ರಮವಹಿಸಬೇಕು ಎಂದು ಸೂಚಿಸಿದರು.

    ಗ್ರಾಮಾಂತರ ಪ್ರದೇಶದಲ್ಲಿ ಶಿಂಷಾ ನದಿ ಪಾತ್ರದಲ್ಲಿ ನಡೆಯುತ್ತಿರುವ ಮರಳುಗಾರಿಕೆಯನ್ನು ತಡೆಯಲು ಆಯಾಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪಿಡಿಒಗಳಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಸಿದರು.
    ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ವಶಪಡಿಸಿಕೊಂಡು ಸರ್ಕಾರಿ ಇಲಾಖೆಗಳ ಕೆಲಸಕ್ಕೆ ಅಥವಾ ಖಾಸಗಿ ಸಂಸ್ಥೆಗಳ ಕಾಮಗಾರಿಗೆ ಕಾನೂನು ರೀತಿಯಲ್ಲಿ ಬಳಸಲಾಗುತ್ತದೆ. ಸಾರ್ವಜನಿಕರು ಕೂಡ ಮನೆ ಕಟ್ಟುವ ಉದ್ದೇಶವಿದ್ದರೆ ಅಗತ್ಯ ದಾಖಲಾತಿಗಳನ್ನು ನೀಡಿ ಮರಳನ್ನು ಸಂಬಂಧಪಟ್ಟ ಇಲಾಖೆಯಿಂದ ಪಡೆಯಬಹುದಾಗಿದೆ ಎಂದು ತಿಳಿಸಿದರು.

    ನದಿ ಪಾತ್ರದಲ್ಲಿ ಎತ್ತಿನಗಾಡಿಯಲ್ಲೂ ಮರಳು ಸಾಗಿಸುವುದನ್ನು ನಿಷೇಧಿಸಲಾಗಿದೆ. ಖಾಲಿ ಗಾಡಿಗೆ 5000 ರೂ. ಹಾಗೂ ಮರಳು ತುಂಬಿದ ಎತ್ತಿನಗಾಡಿಗೆ ಟನ್‌ಗೆ 3 ಸಾವಿರ ದಂಡ ರೂ. ವಿಧಿಸಲಾಗುತ್ತದೆ. ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿರುವ ಮರಳಿನ ಬಗ್ಗೆ ಆಗಾಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದರು. ಸಭೆಯಲ್ಲಿ ತಹಸೀಲ್ದಾರ್ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮಹೇಶ್, ಸಿಪಿಐಗಳಾದ ವೆಂಕಟೇಗೌಡ, ಶಿವಕುಮಾರ್, ಆರ್‌ಎಫ್‌ಒ ಗವಿಸಿದ್ದಯ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts