More

    ಗಣಿ ಜಿಲ್ಲೆ ಬಳ್ಳಾರಿಯಲ್ಲಿ 110 ಡೆಂಘೆ ಪ್ರಕರಣ ಪಾಸಿಟಿವ್, ನಿಯಂತ್ರಣಕ್ಕೆ ಡಿಸಿ ನಕುಲ್ ಸೂಚನೆ

    ಬಳ್ಳಾರಿ: ಜಿಲ್ಲೆಯಲ್ಲಿ ಈ ಬಾರಿ ಡೆಂಘೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದರು.

    ಡಿಸಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಹಾಯಕ ಆಯುಕ್ತ, ತಹಸೀಲ್ದಾರ್, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದರು. ಕಳೆದ ವರ್ಷ ಶಂಕಿತ 658 ಪ್ರಕರಣಗಳಿದ್ದು, 12 ದೃಢಪಟ್ಟಿದ್ದವು. ಈ ವರ್ಷ 1425 ಸಂಶಯಾಸ್ಪದ ಪ್ರಕರಣ ಕಂಡುಬಂದಿದ್ದು, 110 ಪಾಸಿಟಿವ್ ಆಗಿವೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಕೂಡಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ-ಮನೆ ಸಮೀಕ್ಷೆ ನಡೆಸಬೇಕು. ಎಲ್ಲಿಯೂ ನೀರು ನಿಲ್ಲಬಾರದು. ಲಾರ್ವಾ ನಾಶಪಡಿಸಿ, ಡೆಂಘೆಗೆ ಸರ್ಕಾರಿ ಆಸ್ಪತ್ರೆಗಳ ಜತೆಗೆ ಖಾಸಗಿ ಆಸ್ಪತ್ರೆಗಳು ಸಹ ಚಿಕಿತ್ಸೆ ಕೊಡಬೇಕು ಎಂದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜನಾರ್ದನ್ ಮಾತನಾಡಿ, ಕೆರೆ-ಕಟ್ಟೆಗಳಿಗೆ ಲಾರ್ವಾಗಳು ತಿನ್ನುವ ಗ್ಯಾಂಬಿಷಿಯಾ ಮತ್ತು ಗಪ್ಪಿ ಮೀನುಗಳನ್ನು ಬಿಡಬೇಕು. ಫಾಗಿಂಗ್ ಕಟ್ಟುನಿಟ್ಟಾಗಿ ಮಾಡಬೇಕು ಎಂದು ತಿಳಿಸಿದರು. ಜಿಪಂ ಸಿಇಒ ಕೆ.ನಿತೀಶ್, ಎಡಿಸಿ ಮಂಜುನಾಥ, ಪಾಲಿಕೆ ಆಯುಕ್ತೆ ತುಷಾರಮಣಿ, ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮಗಳ ಅನುಷ್ಠಾನ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts