ಬಳ್ಳಾರಿ: ಜಿಲ್ಲೆಯಲ್ಲಿ ಕರೊನಾ ವೈರಸ್ ಮಾರಣಾಂತಿಕವಾಗಿ ಪರಿಣಮಿಸುತ್ತಿದ್ದು, ಕಳೆ ಎರಡು ದಿನಗಳಲ್ಲಿ 18 ಜನ ಮೃತಪಟ್ಟಿದ್ದಾರೆ. ಬುಧವಾರ ಹಾಗೂ ಗುರುವಾರ ತಲಾ ಒಂಬತ್ತು ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 139ಕ್ಕೇರಿದೆ. ಗುರುವಾರ 461 ಜನರಿಗೆ ಸೋಂಕು ದೃಢಪಟ್ಟಿದೆ. ಬಳ್ಳಾರಿ ತಾಲೂಕಿನಲ್ಲಿ 226, ಹೊಸಪೇಟೆ 84, ಸಂಡೂರು 48, ಹಬೊಹಳ್ಳಿ 29, ಕೂಡ್ಲಿಗಿ 23, ಹಡಗಲಿ 19, ಸಿರಗುಪ್ಪ 17, ಹರಪನಹಳ್ಳಿ 11, ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ತಲಾ ಇಬ್ಬರಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12527ಕ್ಕೆ ಏರಿಕೆಯಾಗಿದೆ. ಬಳ್ಳಾರಿ ತಾಲೂಕಿನಲ್ಲಿ 5429, ಹೊಸಪೇಟೆ 3104, ಸಂಡೂರು 1706, ಸಿರಗುಪ್ಪ 641, ಹಡಗಲಿ 539, ಕೂಡ್ಲಿಗಿ 382, ಹರಪನಹಳ್ಳಿ 333, ಹಬೊಹಳ್ಳಿ 324, ಬೇರೆ ಜಿಲ್ಲೆಯ 35 ಹಾಗೂ ಅನ್ಯ ರಾಜ್ಯದ 34 ಜನರಿಗೆ ಸೋಂಕು ತಗುಲಿದೆ. ಈ ಪೈಕಿ 5310 ಸಕ್ರಿಯ ಪ್ರಕರಣಗಳಿವೆ. ಗುರುವಾರ 440 ಜನರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 7078 ಜನರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಗುರುವಾರ 2527 ಜನರಿಗೆ ರ‌್ಯಾಪಿಡ್ ಆ್ಯಂಟಿಜೆನ್ ಹಾಗೂ 665 ಜನರನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 80037 ಜನರಿಗೆ ಕರೊನಾ ಪರೀಕ್ಷೆ ನಡೆಸಲಾಗಿದೆ.