More

    ಕನಿಷ್ಠ 21 ಸಾವಿರ ರೂ. ವೇತನ ನಿಗದಿಪಡಿಸಿ, ಹೊಸಪೇಟೆ ಕಾರ್ಮಿಕ ಇಲಾಖೆ ನಿರೀಕ್ಷಕರಿಗೆ ಫೆಡರೇಷನ್ ಮನವಿ

    ಹೊಸಪೇಟೆ: ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಷನ್ ಮುಖಂಡರು ಬುಧವಾರ ಕಾರ್ಮಿಕ ಇಲಾಖೆ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.

    ಫೆಡರೇಷನ್ ಜಿಲ್ಲಾ ಅಧ್ಯಕ್ಷ ಎನ್.ಯಲ್ಲಾಲಿಂಗ ಮಾತನಾಡಿ, ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ 21 ಸಾವಿರ ರೂ. ಮಾಡಬೇಕು. ಎಲ್ಲರಿಗೂ ಪಿಂಚಣಿ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಗಳನ್ನು ಬಲಗೊಳಿಸಬೇಕು. ಖಾತ್ರಿ ಯೋಜನೆ ಕಾರ್ಮಿಕರ ಕೂಲಿ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ ಅವರು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಜ.8ರಂದು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದರು. ಮುಖಂಡರಾದ ಎಂ.ಗೋಪಾಲ್, ಮಹ್ಮದ್ ರಫೀಕ್, ಕೆ.ರಾಮಾಂಜನಿ, ಆರ್.ಎಸ್.ಪಾಂಡಿಯನ್, ಮಂಜು, ಹುಲಿಗೆಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts