More

    ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕಡೆಗಣನೆ

    ರಾಯಚೂರು: ಕನಿಷ್ಠ ವೇತನ ನಿಗದಿಪಡಿಸಬೇಕು. ಏಕ ರೂಪ ಸೇವಾ ನಿಯಮ ಜಾರಿಗೊಳಿಸಬೇಕೆಂಬುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ಇಲಾಖೆ ಉಪ ನಿರ್ದೇಶಕ ಕಿರಣಕುಮಾರಗೆ ಮನವಿ ಸಲ್ಲಿಸಿ, ಸುಪ್ರೀಂಕೋರ್ಟ್ ಶಿಫಾರಸ್ಸು ಪ್ರಕಾರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವೇತನ, ಭತ್ಯೆ ನಿಗದಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

    ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಸರ್ಕಾರಗಳು ನಿರ್ಲಕ್ಷೃ ಮಾಡುತ್ತಿದ್ದು, ಬಜೆಟ್‌ನಲ್ಲಿ ಅನುದಾನ ಕಡಿತಗೊಳಿಸುವ ಮೂಲಕ ಯೋಜನೆಯನ್ನು ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ. ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಜೀವನವೂ ಅತಂತ್ರವಾಗಿದೆ ಎಂದು ದೂರಿದರು.

    ರಾಜ್ಯ ಸರ್ಕಾರ ಪೋಷಣ್ ಟ್ರಾೃಕ್ ಕಾರ್ಯಕ್ರಮ ಜಾರಿಗಾಗಿ ಮೊಬೈಲ್ ನೀಡಿ ನಾಲ್ಕು ವರ್ಷಗಳಾಗಿದ್ದು, ಅವುಗಳು ಹ್ಯಾಂಗ್ ಆಗುತ್ತಿದ್ದು ಕೆಲಸಕ್ಕೆ ಉಪಯೋಗವಾಗುತ್ತಿಲ್ಲ. ಅವುಗಳನ್ನು ವಾಪಸ್ ಪಡೆದು ಹೊಸ ಮಾದರಿ ಮೊಬೈಲ್‌ಗಳನ್ನು ನೀಡಬೇಕು. ಸಂಘಟನೆ ಮತ್ತು ಮುಷ್ಕರದಲ್ಲಿ ಭಾಗವಹಿಸಿದ ಕಾರಣಕ್ಕೆ ದೆಹಲಿಯಲ್ಲಿ ಕಾನೂನು ಬಾಹಿರವಾಗಿ ಕೆಲಸದಿಂದ ವಜಾ ಮಾಡಿರುವ ಅಂಗನವಾಡಿ ಕಾರ್ಯಕರ್ತೆರಯನ್ನು ಮರು ನೇಮಕ ಮಾಡಿಕೊಳ್ಳಬೇಕು. ಪೋಷಣ್ ಅಭಿಯಾನಕ್ಕೆ ಆಧಾರ್ ಅಥವಾ ಫೋನ್ ನಂಬರ್ ಲಿಂಕ್ ಕಡ್ಡಾಯ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

    ಕಾರ್ಯಕರ್ತೆಯರಿಗೆ ಇತರ ಇಲಾಖೆಗಳ ಕೆಲಸ ಹಚ್ಚುವುದನ್ನು ಕೈ ಬಿಡಬೇಕು. ಸ್ಕೀಮ್ ಕೆಲಸಗಾರರನ್ನು ಕಾರ್ಮಿಕ ಕಾಯ್ದೆಯ ವ್ಯಾಪ್ತಿಗೆ ಒಳಪಡಿಸಬೇಕು. ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts