More

    ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಸಿದ್ದರಾಮಯ್ಯ ಕುರ್ಚಿಗೆ ಕಂಟಕ: ಸಚಿವ ಬೈರತಿ ಸುರೇಶ್

    ಕೋಲಾರ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ನಾಯಕರು ಭರ್ಜರಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ಇತ್ತ ಲೋಕಸಭೆ ಚುನಾವಣೆಯೂ ಸಿಎಂ ಸಿದ್ದರಾಮಯ್ಯ ಮಹತ್ವದಾಗಿದ್ದು, ಸಿಎಂ ಕುರ್ಚಿ ಕಂಟಕ ಇದೆ ಎನ್ನುವ ಮಾತುಗಳು ಹರಿದಾಡುತ್ತಿವೆ.

    ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರವಾದ ಮೈಸೂರು ಹಾಗೂ ಚಾಮರಾಜನಗರದಲ್ಲಿ ಈಗಾಗಲೆ ಸಿಎಂ ಸಿದ್ದರಾಮಯ್ಯ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಈ ಎರಡು ಕ್ಷೇತ್ರಗಳನ್ನು ಗೆಲ್ಲಬೇಕೆಂದು ಹೈಕಮಾಂಡ್​ ಅವರಿಗೆ ಟಾಸ್ಕ್​ ನೀಡಿರುವುದಾಗಿ ತಿಳಿದು ಬಂದಿದ್ದು, ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆದ್ದರೆ ಮಾತ್ರ ಅವರ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

    ಇದೀಗ ಇದಕ್ಕೆ ಪೂರಕವೆಂಬಂತೆ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಚಿವ ಬೈರತಿ ಸುರೇಶ್​ ಇದರ ಬಗ್ಗೆ ಮಾತನಾಡಿದ್ದು, ಎದ್ದಿರುವ ಊಹಾಪೋಹಗಳಿಗೆ ಪುಷ್ಠಿ ನೀಡಿದಂತಾಗಿದೆ. ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಆಪ್ತಬಳಗದಲ್ಲಿ ಸಂಚಲವನ್ನು ಉಂಟು ಮಾಡಿದೆ.

    ಇದನ್ನೂ ಓದಿ: ರಾಮನವಮಿ ಪಾನಕ-ಮಜ್ಜಿಗೆ ಸೇವಿಸಿ 45ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಲೋಕಸಭೆ ಚುನಾವಣೆ ನಿಮಿತ್ತ ಕೋಲಾರ ಜಿಲ್ಲಾ ಕುರುಬ ಸಮುದಾಯದ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಬೈರತಿ ಸುರೇಶ್, ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್​​ ಪಕ್ಷದ ಮೇಲಿರಲಿ, ಸಿದ್ದರಾಮಯ್ಯನವರ ಮೇಲಿರಲಿ, ಹಾಗೇ ಅಭ್ಯರ್ಥಿ ಗೌತಮ್​ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಹೇಳಿದ್ಧಾರೆ.

    ಇದೀಗ ಸಚುವ ಬೈರತು ಸುರೇಶ್​ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಸಚಿವ ಬೈರತಿ ಸುರೇಶ್​ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕರು ಈವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ನೊಳಗಿನ ಸೀಟ್​ ಫೈಟ್​ ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts