ಸಕಲ ಸರ್ಕಾರಿ ಗೌರವದೊಂದಿಗೆ ಸಚಿವ ಸಿ.ಎಸ್​. ಶಿವಳ್ಳಿ ಅಂತ್ಯ ಸಂಸ್ಕಾರ

Latest News

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ಅಕ್ರಮ ಸಂಪತ್ತಿಗೆ ಅಧಿಕಾರಿಗಳ ಕಾವಲು

| ರಮೇಶ ದೊಡ್ಡಪುರ ಬೆಂಗಳೂರು ನಗರ ಪ್ರದೇಶದಲ್ಲಿ ವಸತಿ, ವಾಣಿಜ್ಯ ಪ್ರದೇಶಗಳಲ್ಲಿ ಸಮತೋಲನ ಕಾಯ್ದುಕೊಳ್ಳಲು ರಚಿಸಲಾಗಿರುವ ಕಾನೂನು ಪಾಲಿಸಿ ಅಕ್ರಮ ಕಟ್ಟಡಗಳಿಗೆ ಬ್ರೇಕ್ ಹಾಕಬೇಕಾದ...

ಪೊಲೀಸ್ ಠಾಣೆಗಳಲ್ಲಿ ದಲಿತರ ದಿನ ಆಚರಣೆ ಕಡ್ಡಾಯ: ಪ್ರತಿ ತಿಂಗಳ 2ನೇ ಭಾನುವಾರ ಕಡ್ಡಾಯ, ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧ ಇಲಾಖೆ ಗರಂ

| ಕೀರ್ತಿನಾರಾಯಣ ಸಿ. ಬೆಂಗಳೂರು ದಲಿತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ‘ದಲಿತರ...

ಯರಗುಪ್ಪಿಯಲ್ಲಿರುವ ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಸಮಾಧಿ

ಹುಬ್ಬಳ್ಳಿ: ಶುಕ್ರವಾರ ನಿಧನರಾದ ಪೌರಾಡಳಿತ ಸಚಿವ ಸಿ.ಎಸ್​. ಶಿವಳ್ಳಿ ಅವರ ಅಂತ್ಯಸಂಸ್ಕಾರ ಶನಿವಾರ ಸಂಜೆ ನೆರವೇರಿತು.

ಯರಗುಪ್ಪಿಯಲ್ಲಿರುವ ಅವರ ಜಮೀನಿನಲ್ಲಿ ಹಾಲುಮತದ ಸಮಾಜದ ವಿಧಿವಿಧಾನಗಳೊಂದಿಗೆ ಹಾಗೂ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಶರಣಯ್ಯ ಶಾಸ್ತ್ರೀ ಹಿರೇಮಠ ಪೌರೋಹಿತ್ಯದಲ್ಲಿ ಹಾಲಮತ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನಡೆದವು. 3 ಸುತ್ತು ಕುಶಾಲ‌ ತೋಪು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು.

ತಂದೆ-ತಾಯಿ ಸಮಾಧಿ ಮಗ್ಗಲಲ್ಲೇ ಸಮಾಧಿ
ಯರಗುಪ್ಪಿಯ ಜಮೀನಿನನಲ್ಲಿ ಸಿ.ಎಸ್​. ಶಿವಳ್ಳಿ ಅವರ ತಂದೆ ಸತ್ಯಪ್ಪ ಮತ್ತು ತಾಯಿ ಗಂಗಮ್ಮ ಅವರ ಸಮಾಧಿ ನಿರ್ಮಾಣವಾಗಿದೆ. ಈ ಎರಡು ಸಮಾಧಿಗಳ ಪಕ್ಕದಲ್ಲೇ ಸಿ.ಎಸ್​. ಶಿವಳ್ಳಿ ಅವರನ್ನೂ ಸಮಾಧಿ ಮಾಡಲಾಯಿತು. ಇದಕ್ಕಾಗಿ ಈಶ್ವರ ಲಿಂಗದ ಆಕೃತಿಯಲ್ಲಿ 12 ಪಾದ ಉದ್ದ ಮತ್ತು 12 ಪಾದ ಅಗಲವಾದ ಸಮಾಧಿ ನಿರ್ಮಿಸಲಾಗಿತ್ತು. ಇದರ ಮೇಲೆ ಈಶ್ವರ ಹಾಗೂ ಬಸವಣ್ಣನ ಮೂರ್ತಿಯನ್ನು ಸ್ಥಾಪಿಸಲಾಗುವುದು ಎಂದು ಶಿವಳ್ಳಿ ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಸೇರಿ ಹಲವು ಗಣ್ಯರಿಂದ ಅಂತಿಮ ದರ್ಶನ
ಶನಿವಾರ ಬೆಳಗ್ಗೆ ಹುಬ್ಬಳ್ಳಿಗೆ ವಿಮಾನದ ಮೂಲಕ ಆಗಮಿಸಿ, ರಸ್ತೆ ಮೂಲಕ ಯರಗುಪ್ಪಿ ಗ್ರಾಮಕ್ಕೆ ತೆರಳಿದ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆದರು. ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​. ವಿಶ್ವನಾಥ್​ ಮತ್ತು ಬಸವರಾಜ್​ ಹೊರಟ್ಟಿ ಸಾಥ್​ ನೀಡಿದರು.

ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ. ಪಾಟೀಲ್​. ಡಿ.ಕೆ. ಶಿವಕುಮಾರ್​, ಜಮೀರ್​ ಅಹ್ಮದ್​, ಯು.ಟಿ. ಖಾದರ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಮಾಜಿ ಸಚಿವರಾದ ಎಚ್​.ಕೆ. ಪಾಟೀಲ್​, ಅಲ್ಕೋಡ್​ ಹನುಮಂತಪ್ಪ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಮತ್ತಿತರರು ಉಪಸ್ಥಿತರಿದ್ದರು. (ದಿಗ್ವಿಜಯ ನ್ಯೂಸ್​)

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...