More

    ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನ ಪಾಲಿಸಿ ರಂಜಾನ್ ಆಚರಿಸಿ

    ಚಿಕ್ಕಮಗಳೂರು: ಕರೊನಾ ಸೋಂಕು ದೇಶವ್ಯಾಪಿ ಹರಡಿದ್ದು ಮುಂಜಾಗ್ರತೆಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ನಿಯಮ ಹಾಗೂ ನಿರ್ದೇಶನ ಪಾಲಿಸುವ ಮೂಲಕ ರಂಜಾನ್ ಆಚರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ತಿಳಿಸಿದರು.

    ನಗರದ ಎಸ್ಪಿ ಕಚೇರಿ ಸಭಾಂಗಣದಲ್ಲಿ ಸೋಮವಾರ ರಂಜಾನ್ ಆಚರಿಸುವ ಕುರಿತು ಜಿಲ್ಲೆಯ ವಿವಿಧ ತಾಲೂಕುಗಳ ಮುಸ್ಲಿಂ ಸಮುದಾಯದ ಮುಖಂಡರ ಜತೆ ನಡೆದ ಸಭೆಯಲ್ಲಿ ಮಾತನಾಡಿದರು.

    ರಂಜಾನ್ ಮಾಸವು ಉಪವಾಸದ ಮೂಲಕ ಆತ್ಮನಿವೇದನೆ ಮಾಡಿಕೊಳ್ಳುವ ಸಮಯ. ಆದರೆ ಕರೊನಾ ಸೋಂಕು ಎಲ್ಲೆಡೆ ವ್ಯಾಪಿಸಿ ಜನರ ಸಂಭ್ರಮ ಕಸಿದಿದೆ. ಹಾಗಾಗಿ ಸರ್ಕಾರ ನಮ್ಮೆಲ್ಲರ ಸುರಕ್ಷತೆ ದೃಷ್ಟಿಯಿಂದ ದೇವಾಲಯ, ಮಸೀದಿ, ಚರ್ಚ್​ಗಳಲ್ಲಿ ಉತ್ಸವ, ಪ್ರಾರ್ಥನೆ ಮಾಡುವುದನ್ನು ನಿರ್ಬಂಧಿಸಿದೆ. ಇಲ್ಲಿ ಜನರ ನಂಬಿಕೆಗೆ ತೊಂದರೆ ಮಾಡುವ ಉದ್ದೇಶವಿಲ್ಲ ಎಂದರು.

    ಕರೊನಾ ಸೋಂಕು ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಿಸಿದ್ದು ಇತ್ತೀಚೆಗೆ ನಮ್ಮ ನೆರೆಯ ಹಾಸನ, ಶಿವಮೊಗ್ಗದಲ್ಲಿ ಸಹ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ನಮ್ಮ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಇದಕ್ಕೆ ಜಿಲ್ಲೆಯ ಎಲ್ಲ ಸಮುದಾಯ ಜನರ ಸಹಕಾರವೇ ಕಾರಣ. ಸೋಂಕಿನಿಂದ ಸಾವಿನ ಪ್ರಮಾಣ ಕಡಿಮೆ. ಆದರೆ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೇಗ ಹೆಚ್ಚಾಗಿದೆ. ಹಾಗಾಗಿ ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಎಂದರು.

    ಈ ಬಾರಿಯ ರಂಜಾನ್ ಮಾಸವನ್ನು ಮುಸಲ್ಮಾನರು ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಸ್ವಯಂ ನಿರ್ಧಾರ ಕೈಗೊಂಡು ಆಚರಿಸಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ನಿರ್ದೇಶನದಂತೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಅನುಮತಿ ಸಿಕ್ಕಲ್ಲಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅನುಮತಿ ನೀಡದಿದ್ದಲ್ಲಿ ಮನೆಯಲ್ಲೇ ಪ್ರಾರ್ಥಿಸುವ ಮೂಲಕ ಕರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

    ಇದಕ್ಕೂ ಮೊದಲು ವಿವಿಧ ತಾಲೂಕಿನ ಮುಸ್ಲಿಂ ಮುಖಂಡರು ರಂಜಾನ್ ಹಬ್ಬದಲ್ಲಿ ಕನಿಷ್ಠ ಮಂದಿ ಒಳಗೊಂಡಂತೆ ಸರ್ಕಾರದ ನಿಯಮಗಳನ್ನು ಪಾಲಿಸಿ ಈದ್ಗಾ, ಮೊಹಲ್ಲಾಗಳಲ್ಲಿ ನಮಾಜ್ ಮಾಡಲು ಅನುಮತಿ ನೀಡಬೇಕು. ಮಾಂಸ ಖರೀದಿ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts