ಮೈತ್ರಿ ಸರ್ಕಾರದ ಬಗ್ಗೆ ಯಾರೂ ಅಪಸ್ವರ ಎತ್ತಬಾರದು: ಸಚಿವ ಡಿಕೆಶಿ

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಭವಿಷ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್​ ಮಾಜಿ ಶಾಸಕ ಕೆ.ಎನ್​ರಾಜಣ್ಣನವರಿಗೆ ತಿರುಗೇಟು ನೀಡಿರುವ ಸಚಿವ ಡಿ.ಕೆ.ಶಿವಕುಮಾರ್​, ಮೈತ್ರಿ ಸರ್ಕಾರದ ಬಗ್ಗೆ ಅಪಸ್ವರ ಎತ್ತಿ ಮಾತನಾಡಬಾರದು ಎಂದು ಈಗಾಗಲೇ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ ಎಂದಿದ್ದಾರೆ.
ರಾಜಣ್ಣನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಪಕ್ಷದ ನಾಯಕರು ಕೆಲವು ಇತಿಮಿತಿಗಳನ್ನು ಹಾಕಿದ್ದಾರೆ. ಆ ಪರಿಧಿಯಲ್ಲಿ ಕೆಲಸ ಮಾಡಿದರೆ ಪಕ್ಷ ಉಳಿಸಿಕೊಳ್ಳಬಹುದು ಎಂದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಹೇಗೆ ಸ್ಥಿರಗೊಳಿಸಬೇಕು ಎಂಬುದನ್ನು ಯೋಚಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ತುಮಕೂರಿನಿಂದ ಕೆ.ಎನ್.ರಾಜಣ್ಣ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿ, ರಾಜಣ್ಣನವರ ಈ ಹೇಳಿಕೆಗೆ ಉಪಮುಖ್ಯಮಂತ್ರಿ ಪರಮೇಶ್ವರ್​ ಪ್ರತಿಕ್ರಿಯೆ ನೀಡುತ್ತಾರೆ. ಅವರನ್ನೇ ಕೇಳಲಿ ಎಂದು ಹೇಳಿದ್ದಾರೆ.