More

    ಮನೆ ಮನೆಗೆ ಕುಡಿಯುವ ನೀರು ಪ್ರಧಾನಿ ಗುರಿ : ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

    ಗೌರಿಬಿದನೂರು: ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದ ಮನೆ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವುದು ಪ್ರಧಾನಿ ಮೋದಿ ಅವರ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ನಗರದಲ್ಲಿ ನಗರೋತ್ಥಾನ ಯೋಜನೆಯ ಮೂರನೇ ಹಂತದ 8.5 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ದೈವಕೃಪೆಯಿಂದ ಈ ಬಾರಿ ಉತ್ತಮ ಮಳೆಯಾಗಿದೆ. 2500 ಕೆರೆಗಳನ್ನು ಹೊಂದಿರುವ ಅವಿಭಜಿತ ಕೋಲಾರ ಜಿಲ್ಲೆ ಕೆರೆಗಳ ತವರೂರಾಗಿವೆ. ಹಿರಿಯರು ವೈಜ್ಞಾನಿಕವಾಗಿ ಕೆರೆಗಳ ನಿರ್ಮಾಣ ಮಾಡಿದ್ದು, ಅಂತರ್ಲ ವೃದ್ಧಿಗೆ ಸಹಕಾರಿಯಾಗಿದೆ. 7 ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬುದು ಪ್ರಧಾನಿಯ ಆಶಯವಾಗಿದೆ. ಕೆರೆಗಳಲ್ಲಿ ನೀರಿನ ಶೇಖರಣಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಜೀವಜಲ್ ಮಿಷನ್ ಯೋಜನೆ ರೂಪಿಸಿ, 7000 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ತಾಲೂಕಿನಲ್ಲಿ ಹೆಚ್ಚು ಕಾಮಗಾರಿಗಳನ್ನು ಮಾಡಬೇಕು. ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಕೈಗಾರಿಕೆಗಳನ್ನು ಸ್ಥಾಪಿಸಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂದರು.

    ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆ ಅಂತರ್ಲಮಟ್ಟ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ನಗರೋತ್ಥಾನ, 14-15ನೇ ಹಣಕಾಸು ಯೋಜನೆ ಅಡಿಯಲ್ಲಿ ನಗರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ಬರುವ ಶೇ.70 ಹಣ ಅಧಿಕಾರಿ, ಸಿಬ್ಬಂದಿ ವರ್ಗದ ವೇತನಕ್ಕೆ ಹೋಗುತ್ತದೆ. ನಮಗೆ ಇಷ್ಟ ಬಂದಂತೆ ನೋಟ್ ಪ್ರಿಂಟ್ ಮಾಡಿ ಅಭಿವೃದ್ಧಿ ಮಾಡಲು ಸಾಧ್ಯವ್ಲಿ. ಜನ ಪಾವತಿಸುವ ತೆರಿಗೆ ಹಣದಲ್ಲಿ ಮಾಡಬೇಕು. ಇ್ಲವಾದಲ್ಲಿ ಸಾಲ ಮಾಡಿ ಅಭಿವೃದ್ಧಿ ಕೆಲಸ ಮಾಡಬೇಕು. ಜನತೆ ಸರಿಯಾಗಿ ತೆರಿಗೆ ಪಾವತಿಸಿದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಬಹುದು. ಅಧಿಕಾರಿಗಳು ಬದ್ಧತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದರು.

    ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ನೂತನವಾಗಿ ನಿರ್ಮಿಸಿರುವ ವಸತಿ ಯೋಜನೆಯಲ್ಲಿ 30 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. ನಗರಸಭೆ ಅಧ್ಯಕ್ಷೆ ಗಾಯತ್ರಿ ಬಸವರಾಜ್, ಪೌರಾಡಳಿತ ಉಪನಿರ್ದೇಶಕಿ ರೇಣುಕಾ, ನಗರಸಭೆ ಆಯುಕ್ತ ಸತ್ಯನಾರಾಯಣ್ ಹಾಗೂ ನಗರಸಭೆ ಸದಸ್ಯರು ಇದ್ದರು.

    ಮಂಚೇನಹಳ್ಳಿಯಲ್ಲಿ ಆಸ್ಪತ್ರೆ ನಿರ್ಮಾಣ: ಗೌರಿಬಿದನೂರು ತಾಲೂಕನ್ನು ಬೇರ್ಪಡಿಸಿ ರಚಿಸುತ್ತಿರುವ ಮಂಚೇನಹಳ್ಳಿ ಹೊಸ ತಾಲೂಕು ಕೇಂದ್ರದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ ಹಾಗೂ ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು ಎಂದ ಸಚಿವ ಸುಧಾಕರ್, ಗೌರಿಬಿದನೂರಿನಲ್ಲಿ 26 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಜನವರಿಯಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.

    ಹಣದ ಆಸೆಗೆ ಭೂಮಿ ಮಾರಬೇಡಿ: ಗೌರಿಬಿದನೂರು ಕ್ಷೇತ್ರದ ಯಾವುದೇ ಪಂಚಾಯಿತಿಗಳನ್ನು ಮಂಚೇನಹಳ್ಳಿ ಹೊಸ ತಾಲೂಕಿಗೆ ಸೇರ್ಪಡೆ ಮಾಡದಿರುವುದಕ್ಕೆ ಹಾಗೂ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಒದಗಿಸುತ್ತಿರುವುದಕ್ಕೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಾಲೂಕು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ರೈತರು ದುಡ್ಡಿನ ಆಸೆಗೆ ಬಿದ್ದು ಭೂಮಿ ಕಳೆದುಕೊಳ್ಳಬಾರದು. ಪೌರಾಡಳಿತ ಸಚಿವರು ನಗರೋತ್ಥಾನ ಯೋಜನೆಯಡಿ ಹೆಚ್ಚಿನ ಅನುದಾನ ಒದಗಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts