ಸಹಾಯಕ ಪ್ರಾಧ್ಯಾಪಕ ನೇಮಕ ಆದೇಶ ಹೊರಡಿಸಲು ಸಚಿವ ಡಾ. ಸುಧಾಕರ್ ಸೂಚನೆ

examination1625169207
Published on

ಬೆಂಗಳೂರು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧನೆಗಾಗಿ ನೇಮಕ ಮಾಡಿಕೊಳ್ಳುತ್ತಿರುವ ಸಹಾಯಕ ಪ್ರಾಧ್ಯಾಪಕ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ನೀಡಲು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇರುವುದಿಲ್ಲವೆಂದು ಹಾಗೂ ಕಲ್ಯಾಣ ಕರ್ನಾಟಕ ಮೀಸಲಾತಿ ಸಂಬಂಧಪಟ್ಟ ಪ್ರಕರಣವು ನ್ಯಾಯಾಲಯದಲ್ಲಿ ಇತ್ತೀಚೆಗೆ ಇತ್ಯರ್ಥವಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳು ನನಗೆ ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಮನವಿಗಳನ್ನು ಸಲ್ಲಿಸಿ ಕೂಡಲೇ ನೇಮಕಾತಿ ಆದೇಶ ಹೊರಡಿಸದಂತೆ ಕೋರಿದ್ದಾರೆ.

ಈ ನೇಮಕಾತಿ ಪ್ರಕ್ರಿಯೆ ಆರಂಭವಾಗಿ 3 ವರ್ಷ ಸಮೀಪಿಸುತ್ತಿದ್ದು, ವಿಳಂಬ ಮಾಡದೆ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net