More

    ಅಭಿವೃದ್ಧಿ ಚಟುವಟಿಕೆಗಳಿಗೆ ವೇಗ

    ಶಿವಮೊಗ್ಗ: ಕೃಷಿ, ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ವೇಗ ದೊರಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

    ಮಂಗಳವಾರ 72ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಉತ್ತಮ ಶಿಕ್ಷಣ, ಆರೋಗ್ಯ ಸೇವೆ, ಮಹಿಳೆಯರ ಸುರಕ್ಷತೆ, ಅಪೌಷ್ಟಿಕತೆ ನಿವಾರಣೆ, ಪರಿಶಿಷ್ಟ ಜಾತಿ, ಪಂಗಡದವರ ಅಭ್ಯುದಯವೇ ಸರ್ಕಾರದ ಕಾಳಜಿಯಾಗಿದೆ ಎಂದರು.

    ಗ್ರಾಮೀಣ ಜನತೆಗೆ ಉದ್ಯೋಗ ಕಲ್ಪಿಸುವ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಉದ್ಯೋಗ ಒದಗಿಸಿರುವುದು ನಮ್ಮ ಹೆಗ್ಗಳಿಕೆ. ಉದ್ಯೋಗ ಖಾತ್ರಿ ಯೋಜನೆಯಡಿ ಈ ವರ್ಷ 119 ಕೋಟಿ ರೂ. ಸಂದಾಯ ಮಾಡಲಾಗಿದೆ ಎಂದು ಹೇಳಿದರು.

    ಬೀದಿ ಬದಿ ವ್ಯಾಪಾರಸ್ಥರಿಗೆ ಪಿಎಂ ಸ್ವನಿಧಿ ಯೋಜನೆಯಡಿ 10 ಸಾವಿರ ರೂ. ವಿಶೇಷ ಕಿರು ಸಾಲ ಸೌಲಭ್ಯ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಬೀದಿಬದಿ ವ್ಯಾಪಾರಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆರ್ಥಿಕ ಸ್ವಾವಲಂಬನೆ ದೃಷ್ಟಿಯಿಂದ ಇದು ಮಹತ್ವದ ಹೆಜ್ಜೆ ಎಂದರು.

    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಜಿಪಂ ಸಿಇಒ ಎಂ.ಎಲ್.ವೈಶಾಲಿ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts