More

    ಅಲ್ಪಾವಧಿಯಲ್ಲಿ ಮಾದರಿ ನಗರ: ಈಶ್ವರಪ್ಪ ವಿಶ್ವಾಸ

    ಶಿವಮೊಗ್ಗ: ಸ್ಮಾರ್ಟ್​ಸಿಟಿ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಇನ್ನು ಕೆಲವು ದಿನಗಳಲ್ಲಿ ಮಾದರಿ ನಗರವಾಗಿ ರೂಪುಗೊಳ್ಳಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

    ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್​ಸಿಟಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಗಾರಿಗಳನ್ನು ಖುದ್ದು ವೀಕ್ಷಿಸಿದ್ದು, ಕೆಲವು ಕಡೆಗಳಲ್ಲಿ ನ್ಯೂನತೆಗಳಿರುವುದನ್ನು ಗುರುತಿಸಲಾಗಿದೆ. ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉಳಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳ ವೀಕ್ಷಣೆ ತೃಪ್ತಿಕರವಾಗಿದೆ ಎಂದರು.

    ಕರೊನಾ ಕಾರಣದಿಂದ ಕಾರ್ವಿುಕರು ಸಕಾಲದಲ್ಲಿ ಲಭ್ಯವಾಗದೆ ಕುಂಟುತ್ತಾ ಸಾಗಿದ್ದ ಕಾಮಗಾರಿಗಳಿಗೆ ಮತ್ತು ವೇಗ ದೊರೆತು ತ್ವರಿತವಾಗಿ ನಡೆಯುತ್ತಿವೆ. ನಿಗದಿತಪಡಿಸಿದ ಗುರಿಯಂತೆ ಕಾಮಗಾರಿಗಳ ವೇಗವೂ ಹೆಚ್ಚಿದೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ, ನಗರ ನಿವಾಸಿಗಳಿಗೆ ಅಡಚಣೆಯಾಗಿರುವ ಅರಿವು ನಮಗಿದೆ. ಆದರೆ ಅದು ತಾತ್ಕಾಲಿಕವೂ ಅನಿವಾರ್ಯವೂ ಆಗಿದೆ ಎಂದರು.

    ಎಂಟು ಎಕರೆ ವಿಸ್ತೀರ್ಣದಲ್ಲಿ ಕೈಗೊಂಡ ಪ್ರೀಡಂಪಾರ್ಕ್​ನ ಅಭಿವೃದ್ಧಿ ಕಾರ್ಯಗಳು ಮುಕ್ತಾಯ ಹಂತದಲ್ಲಿದೆ. ಮುಂದಿನ ಮಳೆಗಾಲ ಆರಂಭವಾಗುವುದರೊಳಗಾಗಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡು ನಗರಕ್ಕೆ ಹೊಸ ಕಳೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಡಿಸಿ ಕೆ.ಬಿ.ಶಿವಕುಮಾರ್, ಸ್ಮಾರ್ಟ್​ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಮೇಯರ್ ಸುವರ್ಣಾಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಪ್ರತಿಪಕ್ಷ ನಾಯಕ ಎಸ್.ಎನ್.ಚನ್ನಬಸಪ್ಪ, ಸದಸ್ಯರಾದ ಎಸ್.ಜ್ಞಾನೇಶ್ವರ್, ಸುನಿತಾ ಅಣ್ಣಪ್ಪ, ಇ.ವಿಶ್ವಾಸ್, ನಾಗರಾಜ್ ಕಂಕಾರಿ ಸೇರಿ ಆಯಾ ವಾರ್ಡ್​ಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts