18 C
Bangalore
Friday, December 6, 2019

ಎಂಡಿಸಿಸಿ ಬ್ಯಾಂಕ್‌ಗೆ ಚುನಾವಣೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಸಚಿವ ಜಿ.ಟಿ.ದೇವೇಗೌಡ, ಹಾಲಿ ಅಧ್ಯಕ್ಷ ಚಂದ್ರಶೇಖರ್ ಬಣದ ನಡುವೆ ಜಿದ್ದಾಜಿದ್ದಿ ಸ್ಪರ್ಧೆ
ಮೈಸೂರು: ಕುತೂಹಲ ಕೆರಳಿಸಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್(ಎಂಸಿಡಿಸಿಸಿ) ನಿರ್ದೇಶಕರ ಸ್ಥಾನಗಳಿಗೆ ನ.12ರಂದು ಚುನಾವಣೆ ನಡೆಯಲಿದ್ದು, ಸಂಜೆಯೇ ಫಲಿತಾಂಶ ಹೊರಬೀಳಲಿದೆ.
ಮತದಾನಕ್ಕಾಗಿ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತದಾನ ಜರುಗಲಿದ್ದು, ಬಳಿಕ ಮತ ಎಣಿಕೆ ನಡೆಯಲಿದೆ.
ಸಚಿವ ಜಿ.ಟಿ.ದೇವೇಗೌಡ ಬಣ ಮತ್ತು ಬ್ಯಾಂಕಿನ ಹಾಲಿ ಅಧ್ಯಕ್ಷ ಎಸ್.ಚಂದ್ರಶೇಖರ್ ಬಣದ ನಡುವೆ ಜಿದ್ದಾಜಿದ್ದಿ ಸ್ಪರ್ಧೆ ಏರ್ಪಟ್ಟಿದೆ. ಪಕ್ಷಾತೀತವಾಗಿ ನಡೆಯುವ ಈ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ರಾಜಕಾರಣ ಸ್ಪಷ್ಟವಾಗಿ ನುಸುಳಿದ್ದು, ಎಂಸಿಡಿಸಿಸಿ ಅಧಿಕಾರದ ಮೇಲೆ ಹಿಡಿತ ಸಾಧಿಸಲು ತೆರೆಮರೆಯಲ್ಲಿ ಭಾರಿ ಕಸರತ್ತು ನಡೆಸಿವೆ. ಈ ಚುನಾವಣೆಯಲ್ಲಿ ಯಾವ ಬಣ ಮೇಲುಗೈ ಸಾಧಿಸಲಿದೆ ಎನ್ನುವುದು ಕೌತುಕವಾಗಿದೆ. ರಾಜಕೀಯವಾಗಿ ಬಲಾಢ್ಯರು, ಹಣಬಲ ಹೊಂದಿರುವ ಕೆಲವರು ಅವಿರೋಧವಾಗಿ ಆಯ್ಕೆಯಾಗಿರುವುದು ಹೊಸ ರೀತಿ ರಾಜಕೀಯ ಲೆಕ್ಕಾಚಾರಕ್ಕೆ ಕಾರಣವಾಗಿದೆ.
ತಿಳಿಯಾದ ಅಡೆತಡೆಗಳು: ಚುನಾವಣೆಯನ್ನು ಮುಂದೂಡುವ ಪ್ರಕ್ರಿಯೆಗಳೂ ನಡೆದವು. ಅದಕ್ಕಾಗಿ ಹೈಕೋರ್ಟ್ ಕದವನ್ನು ಅನೇಕ ಬಾರಿ ತಟ್ಟಲಾಗಿದೆ. ಬ್ಯಾಂಕಿನ ಹಾಲಿ ಅಧ್ಯಕ್ಷ ಎಸ್.ಚಂದ್ರಶೇಖರ್ ಅವರು ಚುನಾವಣಾ ಪ್ರಕ್ರಿಯೆ ನಡೆಸದಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಚುನಾವಣೆ ನಡೆಸದಂತೆ ಅಕ್ಟೋಬರ್‌ನಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸುವಂತೆ ಸಹಕಾರ ಇಲಾಖೆ, ಜಿಲ್ಲಾಡಳಿತ, ನಿರ್ದೇಶಕರಾದ ಸಿ.ಬಸವೇಗೌಡ, ಜಿ.ಡಿ.ಹರೀಶ್‌ಗೌಡ, ಬ್ಯಾಂಕಿನ ಉಪಾಧ್ಯಕ್ಷ ಹಾಗೂ ಸಿಇಒ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಶುಕ್ರವಾರ ತೆರವುಗೊಳಿಸಿರುವ ಹೈಕೋರ್ಟ್, ಚುನಾವಣಾ ಪ್ರಕ್ರಿಯೆಗಳನ್ನು ಮುಂದುವರಿಸುವಂತೆ ಆದೇಶಿಸಿದೆ. ಹೀಗಾಗಿ, ಸೋಮವಾರ ಮತದಾನ ನಡೆಸಲು ಅವಕಾಶ ದೊರೆತಿದೆ.
ಬ್ಯಾಂಕ್‌ನ ವ್ಯಾಪ್ತಿಯ 17 ಕ್ಷೇತ್ರಗಳ ಪೈಕಿ 46 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಮೂವರ ನಾಮಪತ್ರಗಳು ತಿರಸ್ಕೃತಗೊಂಡಿವೆ. ಜತೆಗೆ, 5 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಿ.ನರಸೀಪುರದಿಂದ ಸಿ.ಬಸವೇಗೌಡ, ಹುಣಸೂರಿನಿಂದ ಜಿ.ಡಿ.ಹರೀಶ್‌ಗೌಡ, ಕೆ.ಆರ್.ನಗರದಿಂದ ಅಮಿತ್ ದೇವರಹಟ್ಟಿ, ಕೊಳ್ಳೇಗಾಲದಿಂದ ಆರ್.ನರೇಂದ್ರ, ಯಳಂದೂರಿನಿಂದ ಜಯರಾಮ್ ಆಯ್ಕೆಯಾಗಿದ್ದಾರೆ. ಹೀಗಾಗಿ, 17 ಸ್ಥಾನಗಳ ಪೈಕಿ 12 ಸ್ಥಾನಗಳಿಗೆ ಈಗ ಮತದಾನ ನಡೆಯಲಿದೆ.
ಅರ್ಧದಷ್ಟು ಮತದಾರರು ಅನರ್ಹರು: ಮತದಾರರ ಪಟ್ಟಿ ಗೊಂದಲದ ಗೂಡಾಗಿದೆ. ಅಂದಾಜು 1,200 ಮತದಾರರಿದ್ದರು. ವಿವಿಧ ಕಾರಣಕ್ಕಾಗಿ ಕೋರ್ಟ್ ಸೂಚನೆ ಮೇರೆಗೆ ಸರಿಸುಮಾರು ಒಂದು ಸಾವಿರ ಮತದಾರರು ಅನರ್ಹಗೊಂಡು, ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಯಿತು.
ಈ ಕ್ರಮವನ್ನು ಪ್ರಶ್ನಿಸಿ ಅನರ್ಹ ಮತದಾರರು ವೈಯಕ್ತಿಕ ನೆಲೆಯಲ್ಲಿ ಪ್ರತ್ಯೇಕವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತಡೆಯಾಜ್ಞೆಯನ್ನು ತಂದಿದ್ದಾರೆ. ಹಣಬಲ, ಕಾನೂನು ಅರಿವು ಹೊಂದಿರುವ ಮತದಾರರು ಮಾತ್ರ ಈ ಕೆಲಸ ಮಾಡಿ ಮತದಾನದ ಹಕ್ಕನ್ನು ಪಡೆದುಕೊಂಡಿದ್ದಾರೆ. ಇಂತಹ ಮತದಾರರ ಸಂಖ್ಯೆ 414ರಷ್ಟಿದೆ. ಉಳಿದವರು ಈ ರೀತಿ ಕ್ರಮ ವಹಿಸಿದ್ದರೆ ಮತದಾನದ ಹಕ್ಕನ್ನು ಪಡೆದುಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಅರ್ಧದಷ್ಟು ಮತದಾರರು ಮತದಾನ ಹಕ್ಕಿನಿಂದ ವಂಚಿತರಾಗಿದ್ದಾರೆ.
ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಮತದಾನ:  ಈವರೆಗೆ ಅಧಿಕೃತ ಮತದಾರರ ಸಂಖ್ಯೆ 587ರಷ್ಟಿದೆ. ಮತದಾನದ ಅನರ್ಹತೆಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಪ್ರತಿಯನ್ನು ಮತಗಟ್ಟೆಯ ಅಧಿಕಾರಿಗಳಿಗೆ ಸಲ್ಲಿಸಿದರೆ ಅಂತಹವರಿಗೂ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಚುನಾವಣಾಧಿಕಾರಿಯಾದ ಉಪವಿಭಾಗಾಧಿಕಾರಿ ಎಚ್.ಎನ್.ಶಿವೇಗೌಡ ವಿಜಯವಾಣಿಗೆ ತಿಳಿಸಿದರು.
ಕೆಲ ಹೊತ್ತು ಗೊಂದಲ: ಅನರ್ಹ ಮತದಾರರಿಗೂ ಮತದಾನದ ಗುರುತಿನ ಚೀಟಿ ವಿತರಣೆ ಮಾಡಲಾಗಿದೆ ಎಂದು ಅಭ್ಯರ್ಥಿ ಎಸ್‌ಬಿಎಂ ಮಂಜು ಆರೋಪಿಸಿದರು. ಇದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಎಸಿ ಕಚೇರಿಯಲ್ಲಿ ಕೆಲಹೊತ್ತು ಗೊಂದಲ ಉಂಟಾಯಿತು.
ಇದಕ್ಕೆ ತೆರೆ ಎಳೆದ ಉಪವಿಭಾಗಾಧಿಕಾರಿ, ಈ ಹಿಂದಿನ ಮತದಾರರ ಪಟ್ಟಿ ಪ್ರಕಾರ ಗುರುತಿನ ಚೀಟಿ ವಿತರಣೆ ಮಾಡಲಾಗಿದೆ. ಈ ಪೈಕಿ ಕೆಲ ಅನರ್ಹ ಮತದಾರರಿಗೂ ಚೀಟಿ ತಲುಪಿದೆ. ಆದರೆ, ಹಾಲಿ ಮತದಾರರ ಪಟ್ಟಿಯಲ್ಲಿರುವ ಮತದಾರರಿಗೆ ಮಾತ್ರ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿ ಗೊಂದಲ ಬಗೆಹರಿಸಿದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...