More

    ಗ್ರಾಮಗಳ ಅಭಿವೃದ್ಧಿಗೆ ಸಂಕಲ್ಪ : ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್

    ಮುಳಬಾಗಿಲು: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಕಲ್ಪತೊಟ್ಟಿದ್ದು ಪ್ರತಿ ಗ್ರಾಮ ಪಂಚಾಯಿತಿಗೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.

    ತಾಲೂಕಿನ ದೂಲಪಲ್ಲಿ ಗ್ರಾಪಂ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಪಂ ವ್ಯಾಪ್ತಿಯ ಮುಖಂಡರೊಂದಿಗೆ ಚರ್ಚೆ, ಸಾರ್ವಜನಿಕರ ಕುಂದುಕೊರತೆ ಸಭೆ ಉದ್ಘಾಟಿಸಿ ಮಾತನಾಡಿ, ತಾಯಲೂರುನಿಂದ ಅಂಧ್ರಗಡಿವರೆಗೆ ಎಲ್ಲ ಗ್ರಾಮಗಳ ರಸ್ತೆ ಅಭಿವೃದ್ಧಿ ಪಡಿಸಲು ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರ ಕಾಮಗಾರಿ ಅರಂಭಿಸಲಾಗುವುದು. ಡಾ.ನಂಜುಂಡಪ್ಪ ವರದಿಯನ್ವಯ ಗಡಿ ಭಾಗಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

    ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ನೀಡಲಾಗುತ್ತಿದ್ದ ವಯೋವೃದ್ಧರ ಪಿಂಚಣಿ ಸ್ಥಗತಿಗೊಂಡಿರುವ ಬಗ್ಗೆ ಹಲವಾರು ಸಾರ್ವಜನಿಕರು ಸಚಿವರಿಗೆ ದೂರು ನೀಡಿದಾಗ ಸಚಿವರು ತಹಸೀಲ್ದಾರ್‌ಗೆ ಸೂಚನೆ ನೀಡಿ, ಎಲ್ಲರಿಗೂ ಪಿಂಚಣಿ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ತಾಪಂ ಅಧ್ಯಕ್ಷ ಎ.ವಿ.ಶ್ರೀನಿವಾಸ್ ಮಾತನಾಡಿ, ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ರಸ್ತೆ ಮಾಡಲು ಸಚಿವರು ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ತಾಯಲೂರು ಹೋಬಳಿ ಕೇಂದ್ರದಿಂದ ದೂಲಪಲ್ಲಿ, ಬೈರಸಂದ್ರ, ಬಿ.ಹೊಸಹಳ್ಳಿ, ಗ್ರಾಮಗಳ ಮೂಲಕ ಆಂಧ್ರ ಗಡಿವರೆಗೂ 5 ಕಿಮೀ ರಸ್ತೆಯನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು.

    ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಅಯ್ಯಂಗಾರಿ ಶ್ರೀನಿವಾಸ್ ಮಾತನಾಡಿ, ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ರಾಜಕೀಯವಾಗಿ ಮತ್ತು ಅಭಿವೃದ್ಧಿ ವಿಷಯಗಳಲ್ಲಿ ಮುಂದುವರೆಬೇಕು ಎಂದು ಸಲಹೆ ನೀಡಿದರು.

    ತಾಪಂ ಮಾಜಿ ಸದಸ್ಯ ಟಿ.ವಿ.ಭೂಪತಿರೆಡ್ಡಿ, ಭೂ ಮಂಜೂರಾತಿ ಸಮಿತಿ ಸದಸ್ಯ ಆರ್.ಪೆದ್ದಪ್ಪಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಮರನಾರಾಯಣರೆಡ್ಡಿ, ಪಿಡಿಒ ವಿ.ರೂಪಾ, ಮುಖಂಡರಾದ ಶಂಕರಪ್ಪ, ದೂಲಪಲ್ಲಿ ಶಿವಣ್ಣ, ಗಡ್ಡಂಚಿನ್ನೇನಹಳ್ಳಿ ಎಂ.ರಾಮಮೂರ್ತಿನಾಯ್ಡು, ಮೇಲಾಗಾಣಿ ಪದ್ಮನಾಭಗೌಡ, ಟಿ.ಆರ್.ಹಳ್ಳಿ ಸುಬ್ರಮಣಿರೆಡ್ಡಿ, ಬಂಡಹಳ್ಳಿ ಲಕ್ಷ್ಮೀನಾರಾಯಣ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts